ಹೆರಾತ್,26ಅಕ್ಟೋಬರ್ (ಹಿ.ಸ):
ಆ್ಯಂಕರ್ :ಅಫ್ಘಾನಿಸ್ತಾನ ದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ದಾಖಲಾಗಿದೆ. ಅಫ್ಘಾನಿಸ್ತಾನದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸಂಭವಿಸಿದ 4ನೇ ಭೂಕಂಪ ಇದಾಗಿದೆ. ಕಳೆದ ವಾರವಷ್ಟೇ ಹೆರಾತ್ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿ 4 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು, ನೂರಾರು ಮಂದಿ ಗಾಯಗೊಂಡಿದ್ದರು. ಅಫ್ಘಾನ್ ಜನತೆ ಸರಣಿ ಭೂಕಂಪಗಳಿಂದಾಗಿ ತತ್ತರಿಸಿದೆ.ಗುರುವಾರ ಮುಂಜಾನೆ ಅಫ್ಘಾನಿಸ್ತಾನದ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗಿನ ಜಾವ 1.10ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, 150 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಯಾವುದೇ ಹಾನಿ ಅಥವಾ ಸಾವು ನೋವುಗಳ ವರದಿಯಾಗಿಲ್ಲ.
6.3 ತೀವ್ರತೆಯ ಭೂಕಂಪವು ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಕನಿಷ್ಠ 4,000 ಜನರನ್ನು ಬಲಿತೆಗೆದುಕೊಂಡಿತು , ಇದು ಎರಡು ದಶಕಗಳಲ್ಲಿ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ಭೂಕಂಪಗಳಲ್ಲಿ ಒಂದಾಗಿದೆ.
ಹಿಂದೂಸ್ತಾನ್ ಸಮಾಚಾರ್
