ಕಠ್ಮಂಡು, 4 ನವೆಂಬರ್ (ಹಿ.ಸ):
ಆ್ಯಂಕರ್ :
ನೇಪಾಳದ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 70 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ದೆಹಲಿ-ಎನ್ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ. ಭೂಕಂಪನದ ರಾಷ್ಟ್ರೀಯ ಕೇಂದ್ರ ಪ್ರಕಾರ, ಭೂಕಂಪವು ಶುಕ್ರವಾರ ರಾತ್ರಿ 11:32 ಕ್ಕೆ 10 ಕಿಮೀ ಆಳದಲ್ಲಿ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್
