ಲಂಡನ್, 11 ಜನವರಿ(ಹಿ.ಸ):
ಆ್ಯಂಕರ್ :
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲಂಡನ್ ನಲ್ಲಿ ಬ್ರಿಟಿನ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ರಕ್ಷಣೆ, ವ್ಯಾಪಾರ ಮತ್ತು ಪ್ರಾದೇಶಿಕ ವಿಷಯಗಳು ಮಾತುಕತೆಯ ಕಾರ್ಯಸೂಚಿಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕಾಗಿ ನಡೆಯುತ್ತಿರುವ ಮಾತುಕತೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಇದಕ್ಕೂ ಮುನ್ನ ರಾಜನಾಥ್ ಸಿಂಗ್ ಮತ್ತು ಬ್ರಿಟಿಷ್ ಸಹವರ್ತಿ ಗ್ರಾಂಟ್ ಶಾಪ್ಸ್, ಲಂಡನ್ ನಲ್ಲಿ ನಡೆದ ಇಂಗ್ಲೆಂಡ್ -ಇಂಡಿಯಾ ಡಿಫೆನ್ಸ್ ಸಿಇಒ ದುಂಡುಮೇಜಿನ ಸಭೆಯಲ್ಲಿ ಉದ್ಯಮದ ಮುಖಂಡರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಸಹಕಾರ, ಸಹ – ಸೃಷ್ಟಿ ಮತ್ತು ಸಹ – ಆವಿಷ್ಕಾರಕ್ಕಾಗಿ ಭಾರತವು ಇಂಗ್ಲೆಂಡ್ ನೊಂದಿಗೆ ಸಮೃದ್ಧ ಪಾಲುದಾರಿಕೆಯನ್ನು ಕಲ್ಪಿಸುತ್ತದೆ. ಹಾಗೆಯೇ ಸಾಮರ್ಥ್ಯಗಳನ್ನು ಸಂಯೋಜಿಸುವ ಮೂಲಕ, ಎರಡೂ ದೇಶಗಳು ಒಟ್ಟಾಗಿ ದೊಡ್ಡ ಕಾರ್ಯವನ್ನು ಮಾಡಬಹುದು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ೨೦೪೭ ರ ವೇಳೆಗೆ ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗುವ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ರಾಜನಾಥ್ ಸಿಂಗ್ ಪ್ರತಿಪಾದಿಸಿದರು.
ಹಿಂದೂಸ್ತಾನ್ ಸಮಾಚಾರ್
