ದೆಹಲಿ, 8 ಜನವರಿ(ಹಿ.ಸ):
ಆ್ಯಂಕರ್ :
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎರಡು ದಿನಗಳ ಇಂಗ್ಲೆಂಡ್ ಪ್ರವಾಸಕ್ಕೆ ಇಂದು ಪ್ರಯಾಣಿಸಲಿದ್ದಾರೆ. ಅವರೊಂದಿಗೆ ರಕ್ಷಣಾ ಸಚಿವಾಲಯದ ಉನ್ನತ ಮಟ್ಟದ ನಿಯೋಗವೂ ಪ್ರಯಾಣಿಸಲಿದೆ. ಭೇಟಿಯ ವೇಳೆ, ರಾಜನಾಥ್ ಸಿಂಗ್, ಲಂಡನ್ ನಲ್ಲಿ ತಮ್ಮ ಇಂಗ್ಲೆಂಡ್ ರಕ್ಷಣಾ ಕಾರ್ಯದರ್ಶಿ ಗ್ರಾಂಟ್ ಶಾಪ್ಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಸಚಿವರು, ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಮತ್ತು ವಿದೇಶಾಂಗ, ಕಾಮನ್ವೆಲ್ತ್ ಮತ್ತು ಅಭಿವೃದ್ಧಿ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ಡೇವಿಡ್ ಕ್ಯಾಮರೂನ್ ಅವರೊಂದಿಗೂ ಸಭೆ ನಡೆಸುವ ನಿರೀಕ್ಷೆ ಇದೆ.
ಹಿಂದೂಸ್ತಾನ್ ಸಮಾಚಾರ್
