ತೆಹರಾನ್, 15 ಜನವರಿ(ಹಿ.ಸ):
ಆ್ಯಂಕರ್ :
ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಡಾ. ಎಸ್. ಜೈಶಂಕರ್ ಎರಡು ದಿನಗಾಗಿ ಇರಾನ್ ಗೆ ಭೇಟಿ ನೀಡಿದ್ದಾರೆ. ಉಭಯ ದೇಶಗಳ ನಡುವೆ ನಡೆಯುತ್ತಿರುವ ಉನ್ನತ ಮಟ್ಟದ ವಿನಿಮಯದ ಭಾಗವಾಗಿ. ಅವರು ಇರಾನ್ ವಿದೇಶಾಂಗ ಸಚಿವ ಡಾ. ಹೊಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಮಾತುಕತೆ ವೇಳೆ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯ ಪ್ರಮುಖವಾಗಿ ಪ್ರಸ್ತಾಪವಾಗಲಿದೆ. ರಾಜಕೀಯ ಸಹಕಾರ, ಸಂಪರ್ಕ ಉಪಕ್ರಮ ಜನರ ಸಂಬಂಧಗಳು ಕಾರ್ಯಸೂಚಿಯ ಪ್ರಮುಖ ಅಂಶಗಳಾಗಿರುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
