ಮೊಜಾಂಬಿಕ್,
ದಕ್ಷಿಣ ಆಫ್ರಿಕಾದ ದ್ವೀಪ ರಾಷ್ಟ್ರ ಮೊಜಾಂಬಿಕ್ ಕರಾವಳಿ ತೀರದ ಬಳಿ ದುರಂತ ಸಂಭವಿಸಿದ್ದು, 130 ಮಂದಿ ಪ್ರಯಾಣಿಸುತ್ತಿದ್ದ ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿಯಾಗಿರುವ ಮಾಹಿತಿ ಲಭ್ಯವಾಗಿದೆ. ಮೊಜಾಂಬಿಕ್ ದ್ವೀಪದಿಂದ ನಂಪುಲಾ ದ್ವೀಪಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ ನಿಗದಿಗಿಂತ ಹೆಚ್ಚು ಜನರನ್ನು ತುಂಬಿದ್ದೇ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಈ ದೋಣಿ ದೋಣಿ ಪ್ರಯಾಣಿಕರ ಸಾಗಣೆಗೆ ಯೋಗ್ಯವಾಗಿಲ್ಲ, ಸತ್ತವರಲ್ಲಿ ಅನೇಕ ಮಕ್ಕಳೂ ಸೇರಿದ್ದಾರೆ. ನಾಪತ್ತೆಯಾದವರಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಮುದ್ರದ ಪರಿಸ್ಥಿತಿಯು ಈ ಕಾರ್ಯಕ್ಕೆ ತೊಂದರೆಯನ್ನುಂಟುಮಾಡುತ್ತಿದೆ. ಮೊಜಾಂಬಿಕ್ ನಲ್ಲಿ ಕಾಲರಾ ಪ್ರಕರಣಗಳು ಕೂಡ ಹೆಚ್ಚಿದೆ. ಅಕ್ಟೋಬರ್ 2023 ರಿಂದ ಸುಮಾರು 15,000 ಪ್ರಕರಣಗಳನ್ನು ವರದಿ ಮಾಡಿದೆ, 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
