ನವದೆಹಲಿ,
ಪರೋ ವಿಮಾನ ನಿಲ್ದಾಣದಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಇಂದಿನಿಂದ ಆರಂಭವಾಗಬೇಕಿದ್ದ ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನಗಳ ಭೂತಾನ್ ಪ್ರವಾಸವನ್ನು ಮುಂದೂಡಲಾಗಿದೆ. ರಾಜತಾಂತ್ರಿಕ ಮಾರ್ಗಗಳ ಮೂಲಕ ಎರಡೂ ಕಡೆಯವರು ಹೊಸ ದಿನಾಂಕಗಳನ್ನು ನಿಗದಿ ಮಾಡುತ್ತಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
