ನವದೆಹಲಿ, 26 ಫೆಬ್ರವರಿ :ಆ್ಯಂಕರ್:
ಥಾಯ್ಲೆಂಡ್ ನ ಉಪಪ್ರಧಾನಿ ಪರ್ನ್ಪ್ರೀ ಬಹಿದ್ಧಾ-ನುಕಾರ ಅವರು ನಾಲ್ಕು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದಾರೆ.
ನವದೆಹಲಿಗೆ ಆಗಮಿಸಿದ ಅವರಿಗೆ ಸ್ವಾಗತ ಕೋರಲಾಯಿತು. ನಾಲ್ಕು ದಿನಗಳ ತಮ್ಮ ಪ್ರವಾಸದ ಅವಧಿಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ೧೦ ನೇ ಭಾರತ-ಥಾಯ್ಲೆಂಡ್ ಜಂಟಿ ಆಯೋಗದ ಸಭೆಯ ಸಹ-ಅಧ್ಯಕ್ಷತೆ ವಹಿಸಲಿದ್ದಾರೆ. ಬಹಿದ್ಧ-ನೂಕರ ಅವರು ಇಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಸಹ ಭೇಟಿ ಮಾಡಲಿದ್ದಾರೆ. ಇದು ಅವರ ಮೊದಲ ಅಧಿಕೃತ ಭಾರತ ಭೇಟಿಯಾಗಿದೆ.
