ನವದೆಹಲಿ
ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ನಾಳೆಯಿಂದ ಎರಡು ದಿನಗಳ ಭೂತಾನ್ ಗೆ ಭೇಟಿ ನೀಡಲಿದ್ದಾರೆ. ಈ ಪ್ರವಾಸದ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ ಚುಕ್ ಮತ್ತು ಭೂತಾನ್ ನ ನಾಲ್ಕನೇ ರಾಜ ಜಿಗ್ಮೆ ಸಿಂಗ್ಯೆ ವಾಂಗ್ಚುಕ್ ಅವರನ್ನು ಭೇಟಿಯಾಗಲಿದ್ದಾರೆ. ಬಳಿಕ ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಅವರೊಂದಿಗೆ ನರೇಂದ್ರ ಮೋದಿ ಮಾತುಕತೆ ನಡೆಸಲಿದ್ದಾರೆ.
ಈ ಭೇಟಿಯು ಕೇಂದ್ರದ ಭಾರತ ಮತ್ತು ಭೂತಾನ್ ನಡುವಿನ ಸಂಪ್ರದಾಯ ವಿನಿಮಯ ಮತ್ತು ನೆರೆ ದೇಶ ಮೊದಲು ನೀತಿಗೆ ಪೂರಕವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಭಾರತ ಮತ್ತು ಭೂತಾನ್ ಪರಸ್ಪರ ನಂಬಿಕೆ, ತಿಳಿವಳಿಕೆ ಮತ್ತು ಸದ್ಭಾವನೆಯಲ್ಲಿ ಬೇರೂರಿರುವ ಅನನ್ಯ ಮತ್ತು ನಿರಂತರ ಪಾಲುದಾರಿಕೆಯನ್ನು ಹಂಚಿಕೊಳ್ಳುತ್ತವೆ. ಜತೆಗೆ ಉಭಯ ದೇಶಗಳು ಆಧ್ಯಾತ್ಮಿಕ ಪರಂಪರೆ ಮತ್ತು ಅಸಾಧಾರಣ ಬಾಂಧವ್ಯಗಳು ಹಂಚಿಕೊಳ್ಳುತ್ತವೆ ಎಂದು ಸಚಿವಾಲಯ ಹೇಳಿದೆ. ಈ ಭೇಟಿಯು ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಆಸಕ್ತಿಯ ವಿಷಯಗಳ ಬಗ್ಗೆ ಅಭಿಪ್ರಾಯಗಳ ವಿನಿಮಯ ಮಾಡಿಕೊಳ್ಳಲು ಮತ್ತು ಎರಡೂ ದೇಶಗಳ ಜನರ ಅನುಕೂಲಕ್ಕಾಗಿ ಅನುಕರಣೀಯ ಪಾಲುದಾರಿಕೆ ವಿಸ್ತರಿಸುವ ಮಾರ್ಗಗಳ ಕುರಿತು ಉದ್ದೇಶಪೂರ್ವಕವಾಗಿ ಎರಡೂ ಕಡೆಯವರಿಗೆ ಅವಕಾಶವನ್ನು ಒದಗಿಸುತ್ತದೆ ಎಂದು ಸಚಿವಾಲಯ ಹೇಳಿದೆ.
