ನವದಹೆಲಿ,
ಹವಾಮಾನ ವೈಪರೀತ್ಯ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಒಂದು ದಿನ ತಡವಾಗಿ ಭೂತಾನ್ಗೆ ಹೊರಟಿದ್ದಾರೆ. ಎರಡು ದಿನಗಳ ಕಾಲ ಅಲ್ಲಿಯೇ ಪ್ರವಾಸ ನಡೆಸಲಿದ್ದಾರೆ. ಪ್ರವಾಸದ ವೇಳೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಮಾತುಕತೆ ನಡೆಸಬಹುದು. ಇದಕ್ಕೂ ಮೊದಲು, ಭೂತಾನ್ ಪ್ರಧಾನಿ ದಶೋ ಶೆರಿಂಗ್ ತೊಬ್ಗೇ ಮಾರ್ಚ್ 14-18 ರವರೆಗೆ ಭಾರತಕ್ಕೆ ಭೇಟಿ ನೀಡಿದ್ದರು.
ಜನವರಿಯಲ್ಲಿ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಅವರ ಮೊದಲ ವಿದೇಶ ಭೇಟಿಯಾಗಿದೆ. ತಮ್ಮ ಭೇಟಿಯ ವೇಳೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ವಿವಿಧ ಕೈಗಾರಿಕೆಗಳ ಮುಖ್ಯಸ್ಥರೊಂದಿಗೆ ಸಭೆಗಳನ್ನು ನಡೆಸುವುದರ ಜೊತೆಗೆ, ಅವರು ಹಲವಾರು ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಉಭಯ ದೇಶಗಳ ನಡುವಿನ ಸಂಬಂಧಗಳು ಉತ್ತಮವಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ತನ್ನ ವಿದೇಶಾಂಗ ನೀತಿಗಳಲ್ಲಿ ಬದಲಾವಣೆ ತರುತ್ತಲೇ 2014ರಿಂದಲೇ ನೆರೆಯ ರಾಷ್ಟ್ರಗಳತ್ತ ಗಮನ ಹರಿಸತೊಡಗಿತು.
