ದೆಹಲಿ, 22 ಡಿಸೆಂಬರ್(ಹಿ.ಸ):
ಆ್ಯಂಕರ್ :
ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ಆ ಗಮಿಸಲಿದ್ದಾರೆ ಎಂದು ಕೇಂದ್ರದ ಮೂಲಗಳು ತಿಳಿಸಿದೆ. ಇದಕ್ಕೂ ಮುನ್ನ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಂದು ಅವರಿಗೆ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂದ ಮೇಲೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ.
ಮ್ಯಾಕ್ರನ್ 2024 ರ ಗಣರಾಜ್ಯೋತ್ಸವದ ಪರೇಡ್ನಲ್ಲಿ ಮುಖ್ಯ ಅತಿಥಿಯಾಗಲಿರುವ ಆರನೇ ಫ್ರಾನ್ಸ್ ನಾಯಕರಾಗಿದ್ದಾರೆ. ಫ್ರಾನ್ಸ್ ಮಾಜಿ ಪ್ರಧಾನ ಮಂತ್ರಿ ಜಾಕ್ವೆಸ್ ಚಿರಾಕ್ ಅವರು 1976 ಮತ್ತು 1998 ರಲ್ಲಿ ಎರಡು ಬಾರಿ ಗಣರಾಜ್ಯೋತ್ಸವದ ಅತಿಥಿವನ್ನು ಸ್ವೀಕರಿಸಿದ್ದಾರೆ. 1980, 2008 ಮತ್ತು 2016ರಲ್ಲಿ ಮಾಜಿ ಅಧ್ಯಕ್ಷರಾದ ವ್ಯಾಲೆರಿ ಗಿಸ್ಕಾರ್ಡ್ ಡಿ’ಎಸ್ಟೇಂಗ್, ನಿಕೋಲಸ್ ಸರ್ಕೋಜಿ ಮತ್ತು ಫ್ರಾಂಕೋಯಿಸ್ ಹೊಲಾಂಡ್ ಈ ಅತಿಥಿವನ್ನು ಸ್ವೀಕರಿಸಿದರು.
ಈ ಹಿಂದೆ ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ಗೆ ಭೇಟಿ ನೀಡಿದರು. ಈ ಸಮಯದಲ್ಲಿ ಪ್ಯಾರಿಸ್ನಲ್ಲಿ ನಡೆದ ಬಾಸ್ಟಿಲ್ ಡೇ (ಫ್ರೆಂಚ್ ರಾಷ್ಟ್ರೀಯ ದಿನ) ಆಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದರು. ಇದರ ನಂತರ ಸೆಪ್ಟೆಂಬರ್ನಲ್ಲಿ ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಭಾಗಿಯಾಗಿದ್ದರು. ಈ ಸಮಯದಲ್ಲಿ ಮೋದಿ ಮತ್ತು ಮ್ಯಾಕ್ರನ್ ಉಭಯ ರಾಷ್ಟ್ರಗಳ ಅಭಿವೃದ್ಧಿ ಹಾಗೂ ಸಂಬಂಧದ ಬಗ್ಗೆ ಮಾತುಕತೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್
