ಬೆಲ್ಜಿಯಂ,7 ಡಿಸೆಂಬರ್(ಹಿ.ಸ):
ಆ್ಯಂಕರ್ :
ಚೀನಾದ ಮಾರುಕಟ್ಟೆಯಲ್ಲಿ ವಿದೇಶೀ ಉತ್ಪನ್ನಗಳ ಮಾರಾಟಕ್ಕೆ ಮುಕ್ತ ಅವಕಾಶ ಇಲ್ಲದಿರುವುದು ಬಹಳಷ್ಟು ಪಾಶ್ಚಿಮಾತ್ಯ ದೇಶಗಳಿಗೆ ಇರಿಸುಮುರುಸು ತಂದಿದೆ. ಅದರಲ್ಲೂ ಯೂರೋಪ್ ದೇಶಗಳು ಚೀನಾ ಮಾರುಕಟ್ಟೆ ಪ್ರಾಬಲ್ಯದಿಂದ ಹತಾಶಗೊಂಡಿವೆ. ಈ ವಿಚಾರವು ಮುಂಬರುವ ಚೀನಾ ಮತ್ತು ಐರೋಪ್ಯ ಒಕ್ಕೂಟ ವಾರ್ಷಿಕ ಸಭೆಯಲ್ಲಿ ಚರ್ಚೆಗೆ ಬರಲಿದೆ. ಚೀನಾದ ಬೀಜಿಂಗ್ನಲ್ಲಿ ನಡೆಯಲಿರುವ 24ನೇ ಯೂರೋಪಿಯನ್ ಯೂನಿಯನ್ ಚೀನಾ ಮಹಾಸಭೆಗೆ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಐರೋಪ್ಯ ಒಕ್ಕೂಟದ ಮುಖ್ಯಸ್ಥೆ ಉರ್ಸುಲ ವೋನ್ ಡೆರ್ ಲೆಯೆನ್ , ಚೀನಾಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
