ಇಸ್ಲಾಮಾಬಾದ್, 18 ಡಿಸೆಂಬರ್(ಹಿ.ಸ):
ಆ್ಯಂಕರ್ :
: ತಲೆಮರೆಸಿಕೊಂಡಿದ್ದ ಮುಂಬೈ ಸರಣಿ ಸ್ಫೋಟದ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಮೂಲಗಳು ತಿಳಿಸಿವೆ.
ಸದ್ಯ ಪ್ರಾಥಮಿಕ ಮೂಲಗಳ ಮಾಹಿತಿಯಿಂದ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಇನ್ನೂ ಸ್ಪಷ್ಟವಾಗಿಲ್ಲ. ಕಳೆದ ಎರಡು ದಿನಗಳಿಂದಲೂ ಇಬ್ರಾಹಿಂ ಆಸ್ಪತ್ರೆಯಲ್ಲಿರುವುದಾಗಿ ತಿಳಿದುಬಂದಿದೆ.ದಾವೂದ್ ಇಬ್ರಾಹಿಂ ದಾಖಲಾಗಿರುವ ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಆಸ್ಪತ್ರೆಯ ಉನ್ನತ ಅಧಿಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಮಾತ್ರವೇ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಇಬ್ರಾಹಿಂ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಮುಂಬೈ ಪೊಲೀಸರು ಪಾತಕಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಯು ಪ್ರಯತ್ನಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
