ಬೆಂಗಳೂರು, 08 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕಳೆದ ಲೋಕ ಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಇಂದು ಪ್ರತಿಭಟನಾ ಸಮಾವೇಶ ನಡೆಯಲಿದೆ.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಒಳಗೊಂಡಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಮಟ್ಟದ ನಾಯಕರು ಭಾಗಿಯಾಗಲಿದ್ಧಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು ಆಗಮಿಸುವ ನಿರೀಕ್ಷೆಯಿದೆ. ಹೃದಯಭಾಗದಲ್ಲಿ ಪ್ರತಿಭಟನೆ ನಡೆಯುತ್ತಿರುವುದರಿಂದ ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಸಮಾವೇಶಕ್ಕೆ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆಗಮಿಸಲಿದ್ದಾರೆ. ಈ ವೇಳೆ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ ಎಂದು ಪೊಲೀಸ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
