
ದೆಹಲಿ, 16 ಡಿಸೆಂಬರ್(ಹಿ.ಸ):
ಆ್ಯಂಕರ್ :
ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ೪ ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು, ಜನಸಮೂಹವನ್ನು ಉದ್ದೇಶಿಸಿ, ಮಾತನಾಡಲಿದ್ದಾರೆ. ಅಲ್ಲದೆ ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ ಮತ್ತು ಮಿಜೋರಾಂ ಈ ೫ ರಾಜ್ಯಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಅವರು ಚಾಲನೆ ನೀಡಲಿದ್ದಾರೆ. ದೇಶಾದ್ಯಂತ ಒಂದು ಸಾವಿರಕ್ಕೂ ಅಧಿಕ ವಿಕಸಿತ ಭಾರತ ಯಾತ್ರೆಯ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ ಹೆಚ್ಚಿನ ಸಂಖ್ಯೆಯ ಕೇಂದ್ರ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ಸಹ ಭಾಗವಹಿಸಲಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಹಾಗೂ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಆಯೋಜಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
