ದೆಹಲಿ, 12 ಜನವರಿ(ಹಿ.ಸ):
ಆ್ಯಂಕರ್ :
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರದ ನಾಸಿಕ್ನಲ್ಲಿ ರಾಷ್ಟ್ರೀಯ ಯುವ ಉತ್ಸವ ಉದ್ಘಾಟಿಸಲಿದ್ದಾರೆ.
ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ಮೌಲ್ಯಗಳನ್ನು ಗೌರವಿಸುವ ಉದ್ದೇಶದಿಂದ ಪ್ರತಿ ವರ್ಷ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತಿದೆ.
ಈ ವರ್ಷ ರಾಷ್ಟ್ರೀಯ ಯುವ ದಿನವನ್ನು ದೇಶದ ಎಲ್ಲ ಜಿಲ್ಲೆಗಳಲ್ಲಿ ಯುವ ಸಬಲೀಕರಣ ಇಲಾಖೆ ಸಚಿವಾಲಯ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಚರಿಸುತ್ತಿದೆ. ದೇಶದ ೭೫೦ ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಪ್ರಮುಖ ನಗರಗಳಲ್ಲಿ ರಸ್ತೆ ಸುರಕ್ಷತೆ ಕುರಿತ ಅರಿವು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ನನ್ನ ಭಾರತ-ವಿಕಸಿತ ಭಾರತ@೨೦೪೭ ಯುವ ಜನರಿಂದ ಯುವ ಜನರಿಗಾಗಿ ಎನ್ನುವುದು ಈ ಬಾರಿಯ ಧ್ಯೇಯ ವಾಕ್ಯವಾಗಿದೆ.
ದೇಶಾದ್ಯಂತ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಕೆಲಸಗಳು ನಡೆಯಲಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಸಂದರ್ಭದಲ್ಲಿ ಸುಮಾರು ೩೦ ಸಾವಿರದ ೫೦೦ ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಅವರು, ನಗರ ಸಾರಿಗೆ ಮೂಲಸೌಕರ್ಯ ಬಲಪಡಿಸುವ ಅಟಲ್ ಬಿಹಾರಿ ವಾಜಪೇಯಿ ಸೆವಾರಿ ನ್ಹವಾ ಶೆವಾ ಅಟಲ್ ಸೇತು ಲೋಕಾರ್ಪಣೆ ಮಾಡಲಿದ್ದಾರೆ. ಅಟಲ್ ಸೇತುವನ್ನು ಸುಮಾರು ೧೭ ಸಾವಿರದ ೮೦೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
