ದೆಹಲಿ, 14 ಜನವರಿ(ಹಿ.ಸ):
ಆ್ಯಂಕರ್ :
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುತ್ತಿರುವ ವಿಎಚ್ಪಿ ಮತ್ತು ರಾಮ ಮಂದಿರ ನಿರ್ಮಾಣದ ಟ್ರಸ್ಟ್ ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ , ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಆಹ್ವಾನ ನೀಡಿದೆ.
ಈ ಬಗ್ಗೆ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಟ್ವೀಟ್ ಮಾಡಿದ್ದು, ರಾಮ ಮಂದಿರ ನಿರ್ಮಾಣದ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಕೊಡಗೆ ಇದೆ. ಈ ಮೂವರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನವನ್ನು ಸ್ವೀಕರಿಸಿದ ಜೆಪಿ ನಡ್ಡಾ ಅವರು ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದೆ.
ಹಿಂದೂಸ್ತಾನ್ ಸಮಾಚಾರ್
