ದೆಹಲಿ, 21 ಜನವರಿ(ಹಿ.ಸ):
ಆ್ಯಂಕರ್ :
ಅಯೋಧ್ಯಾ ಶ್ರೀರಾಮ ಮಂದಿರ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಸುದ್ದಿ ಪ್ರಕಟಣೆಯಿಂದ ದೂರವಿರುವಂತೆ ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ತಿಳಿಸಿದೆ. ದೃಢಪಡಿಸದೇ ಇರುವ, ಪ್ರಚೋದನಾಕಾರಿ ಹಾಗೂ ತಪ್ಪು ಸಂದೇಶಗಳನ್ನು ವಿಶೇಷವಾಗಿ ಸಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವುದು ಕಂಡುಬರುತ್ತಿದೆ. ಇದು ಕೋಮು ಸೌಹಾರ್ದ ಮತ್ತು ಸಾರ್ವಜನಿಕ ಶಾಂತಿ ಕದಡಬಹುದಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
