
ಕಾಮರೆಡ್ಡಿ, 14 ಡಿಸೆಂಬರ್(ಹಿ.ಸ):
ಆ್ಯಂಕರ್ :
ತೆಲಂಗಾಣದ ಕಾಮರೆಡ್ಡಿ ಜಿಲ್ಲಾ ಕೇಂದ್ರದಲ್ಲಿರುವ ಅಯ್ಯಪ್ಪ ಶಾಪಿಂಗ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಧ್ಯರಾತ್ರಿ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಶಾಪಿಂಗ್ ಮಾಲ್ನ ನಾಲ್ಕು ಮಹಡಿಗಳಿಗೆ ಬೆಂಕಿ ಕ್ರಮೇಣ ವ್ಯಾಪಿಸಿತು. ಈ ಅವಘಡದಲ್ಲಿ ಶಾಪಿಂಗ್ ಮಾಲ್ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
ಬೆಳಗ್ಗೆ 7 ಗಂಟೆ ವೇಳೆಗೆ ಎರಡು ಮಹಡಿಗಳಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು. ಆದರೆ ಇನ್ನೆರಡು ಮಹಡಿಗಳಲ್ಲಿ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಇದರಿಂದ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.
ಈ ಅವಘಡದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿ ಸಂಭವಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆದರೆ, ಈ ಬೆಂಕಿ ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶಾಪಿಂಗ್ ಮಾಲ್ನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.
ಹಿಂದೂಸ್ತಾನ್ ಸಮಾಚಾರ್
