ಅಲ್ಲೂರಿ(ಆಂಧ್ರಪ್ರದೇಶ), 12 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಆಂಧ್ರಪ್ರದೇಶದ ಮಾರೆಡುಮಿಲ್ಲಿ ಘಾಟ್ ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭಯಾನಕ ಬಸ್ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, 10 ಜನರ ಸ್ಥಿತಿ ಗಂಭೀರವಾಗಿದೆ. ಚಿತ್ತೂರಿನ ವಿಘ್ನೇಶ್ವರ ಟ್ರಾವೆಲ್ಸ್‌ಗೆ ಸೇರಿದ ಈ ಬಸ್ ಭದ್ರಾಚಲಂನಿಂದ ಅರಕು ಕಡೆಗೆ ತೆರಳುತ್ತಿದ್ದ ವೇಳೆ ರಾಜು ಗರಿ ಮೆಟ್ಟಿನ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ.
ಬಸ್‌ನಲ್ಲಿ 37 ಪ್ರಯಾಣಿಕರು ಹಾಗೂ ಇಬ್ಬರು ಚಾಲಕರು ಇದ್ದರು. ಘಾಟ್ ರಸ್ತೆಯಲ್ಲಿ ಹಿಮ ಸಂಗ್ರಹವಾಗಿ ಬಸ್ ಸ್ಕಿಡ್ ಆಗಿರುವುದು ಅಪಘಾತಕ್ಕೆ ಕಾರಣವೆಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಗಾಯಾಳುಗಳನ್ನು ಭದ್ರಾಚಲಂ ಆಸ್ಪತ್ರೆ ಹಾಗೂ ಚಿಂತೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಮೃತರಲ್ಲಿ ಐವರು ಮಹಿಳೆಯರು ಸೇರಿದ್ದಾರೆ,ಇಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಪಘಾತದ ಕುರಿತು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಂತಾಪ ವ್ಯಕ್ತಪಡಿಸಿ, ಹಿರಿಯ ಅಧಿಕಾರಿಗಳಿಗೆ ರಕ್ಷಣಾ ಕಾರ್ಯಾಚರಣೆ ವೇಗಗೊಳಿಸುವಂತೆ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
