ನವದೆಹಲಿ, 21 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಮತ್ತೊಮ್ಮೆ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇಂದು ಬೆಳಿಗ್ಗೆ ಆರು ಶಾಲೆಗಳಿಗೆ ಬಾಂಬ್ ಸ್ಫೋಟದ ಬೆದರಿಕೆ ಇಮೇಲ್‌ಗಳು ಬಂದಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಉಂಟು ಮಾಡಿದೆ.
ಮಾಹಿತಿ ದೊರೆತ ತಕ್ಷಣ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸಿವೆ. ಪ್ರಾಥಮಿಕ ಪರಿಶೀಲನೆಗೆ ಇದು ಹುಸಿ ಬಾಂಬ ಬೆದರಿಕೆ ಕರೆ ಎಂದು ತಿಳಿದು ಬಂದಿದೆ.
ಕಳೆದ ನಾಲ್ಕು ದಿನಗಳಲ್ಲಿ ಇದು ಮೂರನೇ ಬಾರಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ.
ಈ ಸರಣಿ ಬೆದರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸೈಬರ್ ತನಿಖೆ ಆರಂಭಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
