• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಈ ನೆಲದ ಪರಂಪರೆಯೇ’ಸರ್ವ ಜನಾಂಗದ ಶಾಂತಿಯ ತೋಟ : ಬಾನು ಮುಷ್ತಾಕ್
National

ಈ ನೆಲದ ಪರಂಪರೆಯೇ’ಸರ್ವ ಜನಾಂಗದ ಶಾಂತಿಯ ತೋಟ : ಬಾನು ಮುಷ್ತಾಕ್

CliQ INDIA
Last updated: September 23, 2025 3:20 am
CliQ INDIA
Share
4 Min Read
SHARE
BHANU mustak

ಮೈಸೂರು, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಹೇಳಿದರು..

ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಿಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ವಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು.

ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರನ್ನಾಗಿಸಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಳನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ , ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ ಎಂದರು.

ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ. ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ , ದೇಶಕ್ಕೆ ಮಾತ್ರ ಸೀಮಿತವಾಗದೇ , ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ ಎಂದರು.

ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ,ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ , ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು ಎಂದರು.

ಈ ನೆಲದ ಪರಂಪರೆಯೇ ಸರ್ವಜನಾಂಗದ ಶಾಂತಿಯ ತೋಟ ವಾಗಿದೆ. ಈ ತೋಟದಲ್ಲಿ ಪ್ರತಿ ಹೂವು ತನ್ನ ಬಣ್ಣದಲ್ಲೇ ಅರಳಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ, ಆದರೆ ಒಟ್ಟಿಗೆ ಸೇರಿದಾಗ ಅದು ಸೌಹಾರ್ದ ಸಿಂಫನಿಯಾಗಲಿ. ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಅದು ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ. ಅದು ಬೇರೆಯವರ ಬದುಕಿನಲ್ಲಿ ಅರ್ಥಪೂರ್ಣವಾಗಿ ನಡೆದುಕೊಳ್ಳುವ ಜವಾಬ್ದಾರಿ. ಅದನ್ನು ಗೌರವಿಸುವು ನಮ್ಮೆಲ್ಲರ ಕರ್ತವ್ಯ ಎಂದರು.

ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವತ್ತ. ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ ಎಂದರು.

ಇತಿಹಾಸದತ್ತ ನೋಡಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದೆಂದಿಗೂ ಪ್ರಸ್ತುತವಾಗುತ್ತಾರೆ. ಅವರು ಹಂಚಿಕೊಳ್ಳುವ ಮನದ ಅರಸ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯದ ಔದಾರ್ಯದ ದೊರೆಯಾಗಿದ್ದರು. ಭೇದ ಭಾವಕ್ಕಿಂತ ವಿಶಾಲ ಮನಸ್ಸಿಗೆ ಗೌರವವಿತ್ತು. ಅವರು ನೀಡಿದ ಸಂದೇಶ ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ. ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕತ್ತದೆ ಎಂದರು.

ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ , ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ. ತಾನೊಬ್ಬ ಕವಿಯತ್ರಿಯಾಗಿದ್ದು, ಕವಿತೆಯ ಮೂಲಕ ನನ್ನ ಸಂದೇಶವನ್ನು ತಿಳಿಸಲು ಬಯಸಿದ್ದು, ಮುಸ್ಲಿಂ ಹೆಣ್ಣುಮಗಳು ಬಾಗಿನವನ್ನು ಪಡೆದಾಗಿನ ತನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಕವಿತೆಯನ್ನು ಓದಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಲಕ್ಷ ಕಂಠ ಗೀತಾ ಪಠಣ ; ದೇಶಕ್ಕೆ ಹೊಸ ಶಕ್ತಿ ನೀಡಿದೆ : ಪ್ರಧಾನಿ ಮೋದಿ
ಜಪಾನ್‌ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರವಾಸ
ಭೋಪಾಲ್‌ನಲ್ಲಿ ಆಯುಷ್ ಮಿಷನ್ ಕುರಿತು ಅಂತರರಾಜ್ಯ ಸಭೆ
ಮಹಿಳಾ ವಿಶ್ವಕಪ್ ಫೈನಲ್ ; ಭಾರತ-ದಕ್ಷಿಣ ಆಫ್ರಿಕಾ ಸೆಣಸಾಟ
ಪ್ರತೀಕಾರದ ದಾಳಿಯ ಇರಾನ್‌ನ ಬೆದರಿಕೆಯ ನಂತರ ಯುಎಸ್ ಮಿಲಿಟರಿ ಪಡೆಗಳು ಹೆಚ್ಚಿನ ಎಚ್ಚರಿಕೆಯಲ್ಲಿವೆ, ಸೈನಿಕರ ಎಲ್ಲಾ ರಜೆಗಳನ್ನು ರದ್ದುಗೊಳಿಸಲಾಗಿದೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮತ್ತೊಂದು ಪರ್ಯಾಯ ಪೀಠ ಅನಗತ್ಯ : ಮನಗೂಳಿಯ ಸಂಗನಬಸವ ಸ್ವಾಮೀಜಿ
Next Article ಆಸ್ಪತ್ರೆಯಲ್ಲಿ ಅಪರಿಚಿತ ವ್ಯಕ್ತಿ ಸಾವು – Hindusthan Samachar Kannada
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?