ಡೆಹ್ರಾಡೂನ್, 21 ಆಗಸ್ಟ್ (ಹಿ.ಸ.) :
ಆ್ಯಂಕರ್ : ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಶಾಲೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಆಘಾತ ಮೂಡಿಸಿದೆ.
ಭೌತಶಾಸ್ತ್ರದ ಶಿಕ್ಷಕರು ಹೊಡೆದಿದ್ದಕ್ಕೆ ಬೇಸರಗೊಂಡ 9ನೇ ತರಗತಿ ವಿದ್ಯಾರ್ಥಿ ಎರಡು ದಿನದ ಬಳಿಕ ದೇಶೀಯ ಪಿಸ್ತೂಲಿನಿಂದ ಶಿಕ್ಷಕರಿಗೆ ಗುಂಡು ಹಾರಿಸಿದ್ದಾನೆ.
ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಗುರುವಾರ ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಕಾಶಿಪುರ) ಅಭಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.
ಭೌತಶಾಸ್ತ್ರ ಶಿಕ್ಷಕರು ಕೇಳಿದ ಪ್ರಶ್ನೆಗೆ ಸರಿಯಾಗಿ ಉತ್ತರಿಸಿದ್ದರೂ, ಅವರು ತಮ್ಮ ಮೇಲೆ ಕಪಾಳಮೋಕ್ಷ ಮಾಡಿದ್ದಾರೆ. ಅದಕ್ಕೆ ಸೇಡು ತೀರಿಸಿಕೊಳ್ಳಲು ಆತ ದೇಶೀಯ ಪಿಸ್ತೂಲ್ ತಂದು ಗುಂಡು ಹಾರಿಸಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಗುಂಡೇಟಿನಿಂದ ಗಾಯಗೊಂಡ ಶಿಕ್ಷಕರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಸ್ಥಿತಿ ಸ್ಥಿರವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
