ರುದ್ರಪ್ರಯಾಗ, 07 ಜುಲೈ (ಹಿ.ಸ.) :
ಆ್ಯಂಕರ್ : ಉತ್ತರಾಖಂಡನ ರುದ್ರಪ್ರಯಾಗ್ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ತೆಹ್ರಿ, ಉತ್ತರಕಾಶಿ, ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಭೂಕುಸಿತದ ಸಾಧ್ಯತೆ ಇದೆ ಎಂದು ಉತ್ತರಾಖಂಡದ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಸೂಚನೆ ನೀಡಿದೆ.
ಜುಲೈ 7 ಮತ್ತು 8 ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಚಮೋಲಿ, ರುದ್ರಪ್ರಯಾಗ, ಉಖಿಮಠ, ಘನ್ಸಾಲಿ, ನರೇಂದ್ರ ನಗರ, ಧನೌಲ್ಟಿ, ದುಂಡಾ ಮತ್ತು ಚಿನ್ಯಾಲಿಸೌರ್ ಸೇರಿದಂತೆ ಹಲವು ಕಡೆ ಭೂ ಕುಸಿತದ ಎಚ್ಚರಿಕೆ ನೀಡಲಾಗಿದೆ.
ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಗಳಲ್ಲಿ ಭೂಕುಸಿತದ ಸಂಭಾವ್ಯತೆ ಹೆಚ್ಚಿದೆ. ಉತ್ತರಕಾಶಿ ಮತ್ತು ರುದ್ರಪ್ರಯಾಗ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
