ನವದೆಹಲಿ, 20 ಆಗಸ್ಟ್ (ಹಿ.ಸ.) :
ಆ್ಯಂಕರ್ : ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಹಾಗೂ ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿಗಳು ಹಾಜರಿರಲಿದ್ದು, ಪ್ರಧಾನಿ ಮೋದಿ ಸ್ವತಃ ಪ್ರತಿಪಾದಕರಾಗಿದ್ದಾರೆ.
ಪ್ರತಿ ಪಕ್ಷ ಇಂಡಿ ಒಕ್ಕೂಟ ತನ್ನ ಅಭ್ಯರ್ಥಿಯಾಗಿ ಬಿ. ಸುದರ್ಶನ್ ರೆಡ್ಡಿ ಅವರನ್ನು ಘೋಷಿಸಿದ್ದು, ಅವರು ಆಗಸ್ಟ್ 21ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ರೆಡ್ಡಿ ಅವರು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹಾಗೂ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.
ಜಗದೀಪ್ ಧಂಖರ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪ ರಾಷ್ಟ್ರಪತಿ ಚುನಾವಣೆ ಸೆಪ್ಟೆಂಬರ್ 9ರಂದು ಸಂಸತ್ ಭವನದಲ್ಲಿ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
