ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭಾರತದ 17ನೇ ಉಪರಾಷ್ಟ್ರಪತಿ ಆಯ್ಕೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು. ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡಕ್ಕೆ ತೆರಳಿ ಮೊದಲು ಮತ ಚಲಾಯಿಸಿದರು. ಮತದಾನ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ಮತ ಎಣಿಕೆ ಕೂಡ ಇದೇ ದಿನ ಸಂಜೆ ನಡೆಯಲಿದೆ.
ಉಪರಾಷ್ಟ್ರಪತಿ ಸ್ಥಾನಕ್ಕಾಗಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಮೈತ್ರಿಕೂಟದ ಜಂಟಿ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ನಡುವೆ ನೇರ ಸ್ಪರ್ಧೆ ನಡೆಯುತ್ತಿದೆ. ಮತದಾನಕ್ಕೂ ಮುನ್ನ ರಾಧಾಕೃಷ್ಣನ್ ಅವರು ಲೋಧಿ ರಸ್ತೆಯ ಶ್ರೀರಾಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬಿಜೆಡಿ, ಶಿರೋಮಣಿ ಅಕಾಲಿ ದಳ ಮತ್ತು ಬಿಆರ್‌ಎಸ್ ಪಕ್ಷಗಳು ಚುನಾವಣೆಯಿಂದ ದೂರ ಉಳಿದಿವೆ. ಇದೇ ವೇಳೆ ಎಐಎಂಐಎಂ ಮತ್ತು ಆಮ್ ಆದ್ಮಿ ಪಕ್ಷ ವಿರೋಧ ಪಕ್ಷದ ಮೈತ್ರಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದರೆ, ವೈಎಸ್‌ಆರ್‌ಸಿಪಿ ಎನ್‌ಡಿಎ ಅಭ್ಯರ್ಥಿ ರಾಧಾಕೃಷ್ಣನ್ ಪರ ನಿಂತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
