
ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಉಪರಾಷ್ಟ್ರಪತಿ ಚುನಾವಣೆಗೆ ಸಿದ್ದತೆಗಳು ಪೂರ್ಣಗೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ಇಂಡಿಯಾ ಕೂಟದ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರ ನಡುವೆ ನೇರ ಸ್ಪರ್ಧೆ ನಡೆಯಲಿದೆ.
782 ಸಂಸದರು ತಮ್ಮ ಮತ ಚಲಾಯಿಸುವ ಹಕ್ಕು ಹೊಂದಿದ್ದು, ಇಬ್ಬರೂ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
,ಭಾರತದ ಉಪರಾಷ್ಟ್ರಪತಿಗಳನ್ನು ರಾಜ್ಯಸಭೆಯ ಚುನಾಯಿತ ಸದಸ್ಯರು, ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಮತ್ತು ಲೋಕಸಭೆಯ ಚುನಾಯಿತ ಸದಸ್ಯರು ಆಯ್ಕೆ ಮಾಡಲಿದ್ದಾರೆ. ದೇಶದ ಎರಡನೇ ಅತ್ಯುನ್ನತ ಹುದ್ದೆಗೆ ಬೆಳಗ್ಗೆ 10 ಗಂಟೆಗೆ ಸಂಸತ್ ಭವನದಲ್ಲಿ ಮತದಾನ ಪ್ರಾರಂಭವಾಗಲಿದ್ದು, ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಇಂದು ಸಂಜೆ ಫಲಿತಾಂಶ ಪ್ರಕಟವಾಗಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
