
ಶ್ರೀನಗರ್, 23 ನವೆಂಬರ್ (ಹಿ.ಸ):
ಆ್ಯಂಕರ್ :ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್ಕೌಂಟರ್ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದರೆ, ಒಬ್ಬ ಯೋಧ ಗಾಯಗೊಂಡಿದ್ದಾರೆ. ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.
ಗಾಯಗೊಂಡ ಯೋಧನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ಸ್ಥಳದಲ್ಲೇ ಇಬ್ಬರು ಭಯೋತ್ಪಾದಕರನ್ನು ಸುತ್ತುವರಿದಿದ್ದು, ಭೀಕರ ಎನ್ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರನ್ನು ಹತ್ಯೆಗೈಯಲು ಹೆಚ್ಚಿನ ಸೈನಿಕರನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಧರ್ಮಸಾಲ್ನ ಬಾಜಿಮಲ್ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎನ್ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಭಯೋತ್ಪಾದಕರ ಪತ್ತೆಗಾಗಿ ಭಾನುವಾರದಿಂದ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
