ದೆಹಲಿ, 19 ಜನವರಿ(ಹಿ.ಸ):
ಆ್ಯಂಕರ್ :
ಎಲ್ಪಿಜಿ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಭಾರಿ ಸ್ಫೋಟ ಸಂಭವಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶುಕ್ರವಾರ ಉತ್ತರ ಪ್ರದೇಶದ ಗೊಂಡಾದಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ಗೆ ಬೆಂಕಿ ಹೊತ್ತಿಕೊಂಡಿತ್ತು. ಎಲ್ಪಿಜಿ ಸಿಲಿಂಡರ್ಗಳನ್ನು ತುಂಬಿದ್ದ ಟ್ರಕ್ ಲಕ್ನೋದಿಂದ ಗೊಂಡಾಗೆ ಬರುತ್ತಿದ್ದಾಗ ಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ಪ್ರಮುಖ ಲಕ್ನೋ-ಗೊಂಡಾ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಟ್ರಕ್ ಚಾಲಕ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ದೃಶ್ಯಗಳು ಒಂದರ ನಂತರ ಒಂದರಂತೆ ಅನೇಕ ಸಿಲಿಂಡರ್ಗಳು ಸ್ಫೋಟಗೊಳ್ಳುವುದು ಕಂಡುಬಂದಿದೆ, ಇದು ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿತು. ಬೆಂಕಿ ನಂದಿಸಲು ಪ್ರಯತ್ನ ನಡೆಸಲಾಯಿತು.
ಏತನ್ಮಧ್ಯೆ, ಯಾವುದೇ ಅನಾಹುತ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ವಾಹನಗಳನ್ನು ಘಟನಾ ಸ್ಥಳದಿಂದ ಒಂದು ಕಿಲೋಮೀಟರ್ ದೂರದಲ್ಲಿ ನಿಲ್ಲಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್
