ದೆಹಲಿ, 8 ಜನವರಿ(ಹಿ.ಸ):
ಆ್ಯಂಕರ್ :
ಕಳೆದ ಒಂದು ವರ್ಷದಲ್ಲಿ ದೇಶಾದ್ಯಂತ ವಿವಿಧ ಶಾಲೆಗಳಲ್ಲಿ ನಡೆದ ’ಏಕ್ ಭಾರತ್ ಶ್ರೇಷ್ಠ್ ಭಾರತ್’ ಕಾರ್ಯಕ್ರಮದಲ್ಲಿ ೨ ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಎಂದು ಸರ್ಕಾರ ಹೇಳಿದೆ. ರಾಷ್ಟ್ರೀಯ ಸಮಗ್ರತೆಗಾಗಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮ ದಿನದ ಅಂಗವಾಗಿ ೨೦೧೫ ರಲ್ಲಿ ಏಕ್ ಭಾರತ್ ಶ್ರೇಷ್ಠ್ ಭಾರತ್ ಕಾರ್ಯಕ್ರಮವನ್ನು ಸರ್ಕಾರ ಅನಾವರಣಗೊಳಿಸಿತ್ತು. ವೈವಿದ್ಯಮಯ ಸಂಸ್ಕೃತಿಗಳ ಜನರೊಂದಿಗೆ ಪರಸ್ಪರ ಸಂವಹನ ವೃದ್ಧಿಸುವ ಗುರಿಯೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿವಿಧ ಶಾಲೆಗಳಲ್ಲಿ ೪ ಲಕ್ಷಕ್ಕೂ ಹೆಚ್ಚು ಏಕ್ ಭಾರತ್ ಶ್ರೇಷ್ಠ್ ಭಾರತ್ ಸಂಘಗಳು ಸ್ಥಾಪನೆಯಾಗಿವೆ ಎಂದು ಸಚಿವಾಲಯ ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್
