ಕಿಯೋಂಜಾರ್, 1 ಡಿಸೆಂಬರ್(ಹಿ.ಸ):
ಆ್ಯಂಕರ್ :
ಒಡಿಶಾದ ಕಿಯೋಂಜಾರ್ ಜಿಲ್ಲೆಯ ರಾಷ್ರೀಯ ಹೆದ್ದಾರಿ-20 ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ದಲ್ಲಿ 8 ಜನರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ತುಂಬಿದ್ದ ವ್ಯಾನ್ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಶುಕ್ರವಾರ (ಡಿಸೆಂಬರ್ 01) ಬೆಳಗ್ಗೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಗಂಜಾಂನ ದಿಗಪಹಂಡಿ ನಿವಾಸಿಗಳು.
ಪೊದಮರಿ ಗ್ರಾಮದ 20 ಮಂದಿ ಜಿಲ್ಲೆಯ ಮಾ ತಾರಿಣಿ ದೇವಸ್ಥಾನಕ್ಕೆ ವ್ಯಾನ್ನಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ಪೈಕಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಘಾಟಗಾಂವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಆರಂಭದಲ್ಲಿ ಗಾಯಾಳುಗಳನ್ನು ಘಾಟ್ಗಾಂವ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ನಂತರ ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜಿಗೆ ಉಲ್ಲೇಖಿಸಲಾಯಿತು. ಈ ಅವಘಡ ಎಷ್ಟು ಭೀಕರವಾಗಿತ್ತೆಂದರೆ ವ್ಯಾನ್ ಹಾರಿ ಹೋಗಿದೆ.
ಮಾಹಿತಿ ಪಡೆದ ಬಲಿಜೋಡಿ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
