ನವದಹೆಲಿ, 9 ಡಿಸೆಂಬರ್(ಹಿ.ಸ):
ಆ್ಯಂಕರ್ :
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ವಿಕಸಿತ ಭಾರತ್ ಸಂಕಲ್ಪ ಯಾತ್ರೆಯ ಭಾಗವಾಗಿ ಕರ್ನಾಟಕದ ತುಮಕೂರಿನ ಓರ್ವ ಫಲಾನುಭವಿ ಸೇರಿದಂತೆ ಕೇಂದ್ರದ ಯೋಜನೆಗಳ ಐವರು ಫಲಾನುಭವಿಗಳೊಂದಿಗಿನ ವರ್ಚುವಲ್ ಸಂವಾದ ಪ್ರಗತಿಯಲ್ಲಿದೆ. ದೇಶಾದ್ಯಂತ ೨ ಸಾವಿರಕ್ಕೂ ಅಧಿಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ವಾಹನಗಳು, ಸಾವಿರಾರು ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ಸಾಮಾನ್ಯ ಸೇವಾ ಕೇಂದ್ರಗಳೂ ಕೂಡ ಸಂವಾದದಲ್ಲಿ ಪಾಲ್ಗೊಂಡಿವೆ. ಕೇಂದ್ರ ಸಚಿವರು, ಸಂಸದರು ಹಾಗೂ ಸ್ಥಳೀಯ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ತುಮಕೂರಿನಲ್ಲಿ ಕೇಂದ್ರ ಯೋಜನೆಗಳ ಫಲಾನುಭವಿಗಳೊಂದಿಗೂ ಇಂದು ಸಂವಾದ ನಡೆಸಲಿದ್ದಾರೆ. ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ದೇಶಾದ್ಯಂತ ಕೈಗೊಳ್ಳಲಾಗುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಪ್ರಯೋಜನೆಗಳು ಎಲ್ಲ ಉದ್ದೇಶಿತ ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ತಲುಪಿಸುವ ಮೂಲಕ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳನ್ನು ಅನುಷ್ಠಾನಗೊಳಿಸುವ ಗುರಿ ಹೊಂದಿದೆ. ಕರ್ನಾಟಕದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಹಲವು ಕೇಂದ್ರ ಸಚಿವರು ಇಂದು ಪಾಲ್ಗೊಂಡಿದ್ದು, ಧಾರವಾಡದಲ್ಲಿ ಪ್ರಲ್ಹಾದ್ ಜೋಶಿ, ಉಡುಪಿಯಲ್ಲಿ ಶೋಭಾ ಕರಂದ್ಲಾಜೆ, ಬೀದರ್ನಲ್ಲಿ ಭಗವಂತ ಖೂಬಾ, ಚಿತ್ರದುರ್ಗದಲ್ಲಿ ನಾರಾಯಣಸ್ವಾಮಿ, ಬೆಂಗಳೂರು ಗ್ರಾಮಾಂತರದಲ್ಲಿ ಜ್ಯೋತಿರಾಧಿತ್ಯಾ ಸಿಂಧಿಯಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
