• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಇನ್ನಿಲ್ಲ
National

ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಇನ್ನಿಲ್ಲ

CliQ INDIA
Last updated: December 12, 2025 5:30 pm
CliQ INDIA
Share
2 Min Read
SHARE

ಲಾತೂರ್, 12 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಾಜಿ ಕೇಂದ್ರ ಗೃಹ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಇಂದು ಬೆಳಿಗ್ಗೆ ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. 90 ವರ್ಷದ ಪಾಟೀಲ್ ಅವರು ಕೆಲಕಾಲದಿಂದ ಅಸ್ವಸ್ಥರಾಗಿದ್ದು, ಇಂದು ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅಕ್ಟೋಬರ್ 12, 1935 ರಂದು ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಚಾಕೂರ್ ಗ್ರಾಮದಲ್ಲಿ ಜನಿಸಿದ ಪಾಟೀಲ್, ಭಾರತೀಯ ರಾಜಕೀಯದಲ್ಲಿ ಅತ್ಯಂತ ವಿಶಿಷ್ಟ ಸ್ಥಾನ ಪಡೆದ ವ್ಯಕ್ತಿಯಾಗಿದ್ದರು. ಸಂಸತ್ತು, ಕೇಂದ್ರ ಸಚಿವ ಸಂಪುಟ ಹಾಗೂ ರಾಜ್ಯ ವಿಧಾನಮಂಡಲಗಳಲ್ಲಿ ಅವರು ನಿರ್ವಹಿಸಿದ ಅನೇಕ ಜವಾಬ್ದಾರಿಗಳು, ಅವರ ದೀರ್ಘ ಮತ್ತು ಪ್ರಭಾವಶೀಲ ಸಾರ್ವಜನಿಕ ಬದುಕಿನ ಸಾಕ್ಷಿಯಾಗಿದೆ.

ಪಾಟೀಲ್ ಲೋಕಸಭೆಯ 10ನೇ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದು, ನಾಲ್ಕು ದಶಕಗಳಿಗಿಂತ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. 1980ರಲ್ಲಿ ರಾಷ್ಟ್ರ ರಾಜಕೀಯಕ್ಕೆ ಪ್ರವೇಶಿಸಿದ ಅವರು, ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದರು. 2004ರವರೆಗೆ ಅವರು ಸತತ ಏಳು ಅವಧಿಗಳಿಗೆ ಲೋಕಸಭಾ ಸದಸ್ಯರಾಗಿದ್ದರು.

1980–1990ರ ಅವಧಿಯಲ್ಲಿ ಅವರು ಸಂಸತ್ ಸದಸ್ಯರ ವೇತನ ಮತ್ತು ಭತ್ಯೆಗಳ ಜಂಟಿ ಸಮಿತಿಯಲ್ಲಿ ಸೇವೆ ಸಲ್ಲಿಸಿ ನಂತರ ಅದರ ಅಧ್ಯಕ್ಷರಾಗಿದ್ದರು. ಸಂಸತ್ತಿನಲ್ಲಿ ಅವರು ವಹಿಸಿದ ಜವಾಬ್ದಾರಿಗಳು ವ್ಯಾಪಕ ಮತ್ತು ಬಹುಮಟ್ಟಿನವಾಗಿದ್ದು, ರಕ್ಷಣಾ, ವಾಣಿಜ್ಯ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಮಾಣು ಶಕ್ತಿ, ಎಲೆಕ್ಟ್ರಾನಿಕ್ಸ್, ಬಾಹ್ಯಾಕಾಶ, ಸಾಗರ ಅಭಿವೃದ್ಧಿ, ಜೈವಿಕ ತಂತ್ರಜ್ಞಾನ, ಸಿಬ್ಬಂದಿ ಮತ್ತು ತರಬೇತಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳು, ಆಡಳಿತ ಸುಧಾರಣೆಗಳು, ರಕ್ಷಣಾ ಉತ್ಪಾದನೆ, ನಾಗರಿಕ ವಿಮಾನಯಾನ ಮತ್ತು ಪ್ರವಾಸೋದ್ಯಮ ಸೇರಿದಂತೆ ಹಲವು ಇಲಾಖೆಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2004 ರಿಂದ 2008 ರವರೆಗೆ ಪಾಟೀಲ್ ದೇಶದ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದರು. 26/11 ಮುಂಬೈ ಭಯೋತ್ಪಾದಕ ದಾಳಿಯ ನಂತರ ಭದ್ರತಾ ಲೋಪಗಳಿಗೆ ನೈತಿಕ ಹೊಣೆ ಹೊತ್ತು ಅವರು ನವೆಂಬರ್ 30, 2008 ರಂದು ಪದವಿ ತ್ಯಜಿಸಿದ್ದರು.

2010 ರಿಂದ 2015 ರವರೆಗೆ ಪಾಟೀಲ್ ಪಂಜಾಬ್ ರಾಜ್ಯಪಾಲರಾಗಿ ಮತ್ತು ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದರು. ಇದಕ್ಕೂ ಮೊದಲು, ಅವರು ಎರಡು ಬಾರಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾಗಿದ್ದರು.

ಶಿವರಾಜ್ ಪಾಟೀಲ್ ಅವರ ನಿಧನದಿಂದ ದೇಶದ ರಾಜಕೀಯ ವಲಯದಲ್ಲಿ ಆಳವಾದ ದುಃಖ ವ್ಯಕ್ತವಾಗಿದ್ದು, ಅನೇಕ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ – Hindusthan Samachar Kannada
ವಿಜಯ್ ನೇತೃತ್ವದ TVK ತಮಿಳುನಾಡಿನಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್‌ನಿಂದ ನಿರ್ಣಾಯಕ ಬೆಂಬಲದ ನಂತರ ಬಹುಪಾಲು ಪಡೆದುಕೊಂಡಿದೆ
ಸಂತಾಲಿ ಭಾಷೆಯಲ್ಲಿ ಸಂವಿಧಾನ ಪ್ರಕಟಣೆ ಶ್ಲಾಘನೀಯ : ಪ್ರಧಾನಿ ಮೋದಿ
ಮೋದಿ ಅವರ 'ಮನ್ ಕಿ ಬಾತ್' ಕಾರ್ಯಕ್ರಮ
ಡಿಜಿಟಲ್ ಇಂಡಿಯಾ ಹತ್ತು ವರ್ಷಗಳ ಸಾಧನೆ ; ರಾಷ್ಟ್ರಮಟ್ಟದ ಸಂಭ್ರಮ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಟ್ರಂಪ್ ವೆನೆಜುವೆಲಾ ಮೇಲೆ ಒತ್ತಡ ಹೆಚ್ಚಿಸುತ್ತಿದ್ದಂತೆ ಪುಟಿನ್ ಮತ್ತು ಲುಕಾಶೆಂಕೊ ಮಡುರೊ ಅವರನ್ನು ತಲುಪುತ್ತಾರೆ | BulletsIn
Next Article ರಾಜ್ಯ ಮಟ್ಟದ ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?