ಕುಲ್ಗಾಮ್, 08 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಗ್ರಾಮದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಇಂದು 8ನೇ ದಿನಕ್ಕೂ ಮುಂದುವರೆದಿದೆ. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿದ್ದು, ರಾತ್ರಿಯಿಡೀ ಗುಂಡಿನ ಚಕಮಕಿ ಹಾಗೂ ಸ್ಫೋಟಗಳು ನಡೆದಿವೆ. ಕಾರ್ಯಾಚರಣೆ ಇದೀಗ ಅಂತಿಮ ಹಂತದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಟ್ಟ ಅರಣ್ಯ ಹಾಗೂ ಬಿಕ್ಕಟ್ಟಿನ ಭೂಪ್ರದೇಶದ ನಡುವೆಯೇ ಭದ್ರತಾ ಪಡೆಗಳು ಮುನ್ನೆಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುತ್ತಿವೆ. ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ತುರ್ತು ಸಂಪರ್ಕದ ಸಲುವಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸ್ಥಳೀಯರಿಗಾಗಿ ಸಹಾಯವಾಣಿ ಸಂಖ್ಯೆಗಳನ್ನು ತೆರೆಯಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
