• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಕೆನಡಾದ ವಿದೇಶಾಂಗ ಸಚಿವೆ ಅನಿತಾ ಆನಂದ್ ಭಾರತ ಭೇಟಿ
National

ಕೆನಡಾದ ವಿದೇಶಾಂಗ ಸಚಿವೆ ಅನಿತಾ ಆನಂದ್ ಭಾರತ ಭೇಟಿ

CliQ INDIA
Last updated: October 12, 2025 9:55 pm
CliQ INDIA
Share
1 Min Read
SHARE

ನವದೆಹಲಿ, 12 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾರತ ಮತ್ತು ಕೆನಡಾ ನಡುವಿನ ಅಸಮಾಧಾನದ ಹಂತದ ನಂತರ, ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಮತ್ತೆ ಚೇತರಿಸಿಕೊಳ್ಳುವ ನಿರೀಕ್ಷೆ ಮೂಡಿದೆ. ಈ ಹಿನ್ನೆಲೆಯಲ್ಲಿ ಕೆನಡಾದ ನೂತನ ವಿದೇಶಾಂಗ ಸಚಿವೆ ಅನಿತಾ ಆನಂದ್ ಇಂದು ನವದೆಹಲಿಗೆ ಆಗಮಿಸಿದ್ದಾರೆ.

ಅನಿತಾ ಆನಂದ್ ಅವರ ಮೂರು ರಾಷ್ಟ್ರಗಳ ಏಷ್ಯಾ ಪ್ರವಾಸದಲ್ಲಿ ಭಾರತಕ್ಕೆ ಮೊದಲ ಭೇಟಿಯಾಗಿದೆ , ಬಳಿಕ ಅವರು ಸಿಂಗಾಪುರ ಮತ್ತು ಚೀನಾಕ್ಕೆ ತೆರಳಲಿದ್ದಾರೆ. ದೆಹಲಿಯಲ್ಲಿ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ, ವ್ಯಾಪಾರ, ಇಂಧನ ಮತ್ತು ಭದ್ರತೆ ಕ್ಷೇತ್ರಗಳಲ್ಲಿ ಕಾರ್ಯತಂತ್ರದ ಸಹಕಾರದ ಹೊಸ ಚೌಕಟ್ಟು ರೂಪಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಅನಿತಾ ಆನಂದ್ ಮುಂಬೈಗೂ ಭೇಟಿ ನೀಡಲಿದ್ದು, ಅಲ್ಲಿ ಭಾರತ-ಕೆನಡಾ ವ್ಯವಹಾರ ಹೂಡಿಕೆ ಮತ್ತು ಉದ್ಯೋಗಾವಕಾಶಗಳ ವಿಸ್ತರಣೆ ಕುರಿತು ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಕೆನಡಾದ ಹಿಂದೂ ಮೂಲದ ದಂಪತಿಗಳ ಪುತ್ರಿಯಾಗಿರುವ ಅನಿತಾ ಆನಂದ್ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದು, ಇತ್ತೀಚೆಗೆ ಪ್ರಧಾನಿ ಮಾರ್ಕ್ ಕಾರ್ನಿ ಅವರ ನೂತನ ಸಂಪುಟದಲ್ಲಿ ವಿದೇಶಾಂಗ ಸಚಿವೆ ಆಗಿ ನೇಮಕಗೊಂಡಿದ್ದಾರೆ. ಅವರು ಹಿಂದಿನ ಸರಕಾರಗಳಲ್ಲಿ ರಕ್ಷಣಾ ಹಾಗೂ ಸಾರಿಗೆ ಸಚಿವೆ ಆಗಿ ಸೇವೆ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 2023ರಲ್ಲಿ, ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಭಾಗಿಯಾಗಿದೆ ಎಂದು ಆರೋಪಿಸಿದ ನಂತರ ಎರಡೂ ದೇಶಗಳ ಸಂಬಂಧ ಹದಗೆಟ್ಟಿತ್ತು. ಭಾರತವು ಆ ಆರೋಪಗಳನ್ನು ತೀವ್ರವಾಗಿ ತಳ್ಳಿಹಾಕಿತ್ತು. ಟ್ರುಡೊ ಅವರ ಪತನದ ನಂತರ, ಹೊಸ ಆಡಳಿತದೊಂದಿಗೆ ಸಂಬಂಧ ಪುನರುಜ್ಜೀವನಗೊಳ್ಳುವ ಭರವಸೆ ಇದೀಗ ಕಾಣುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

Government extends LPG cylinder booking gap to 25 days to prevent hoarding amid rising global oil prices
ಗಿಗ್ ಕೆಲಸಗಾರರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರಗಳ ಸ್ಪಷ್ಟ ಕ್ರಮ : ಜೈರಾಮ್ ರಮೇಶ್
ಬೆಳಗಾವಿ : ಗಾಂಧಿ ಭಾರತ ಕಾರ್ಯಕ್ರಮಕ್ಕೆ ಸಿದ್ದತೆ ಪೂರ್ಣ | BulletsIn
ಜಾತಿ ಮನೋಭಾವನೆ ಬಿಟ್ಟು ಒಟ್ಟಾಗಿ ಕೆಲಸ ಮಾಡೋಣ
ದೆಹಲಿ–ಜಮ್ಮುವಿನಲ್ಲಿ ದಟ್ಟ ಮಂಜು ; ಇಂಡಿಗೋ ವಿಮಾನ ವೇಳಾಪಟ್ಟಿಯಲ್ಲಿ ಬದಲಾವಣೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
Next Article ಮುಕ್ತ ವಿಶ್ವವಿದ್ಯಾನಿಲಯದ ಪದವಿ-ಸ್ನಾತಕೋತರ ಪದವಿ ಪ್ರವೇಶಕ್ಕೆ ಅ.15 ಕೊನೆಯ ದಿನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?