
ದೆಹಲಿ, 15 ಡಿಸೆಂಬರ್(ಹಿ.ಸ):
ಆ್ಯಂಕರ್ :ಇತ್ತೀಚಿನ ಟೈಮ್ಸ್ ನೌ-ಇಟಿಜಿ ಸಮೀಕ್ಷೆಯ ಪ್ರಕಾರ ನರೇಂದ್ರ ಮೋದಿ ಸರ್ಕಾರವು ಮೂರನೇ ಬಾರಿಗೆ ಕೇಂದ್ರದಲ್ಲಿ ಅಕಾರದ ಗದ್ದುಗೆ ಏರಲಿದ್ದು, ಐತಿಹಾಸಿಕ ಸಾಧನೆ ಮೆರೆಯಲಿದೆ. ಸಮೀಕ್ಷೆಯು 2024ರ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವು 323 ಸ್ಥಾನಗಳಲ್ಲಿ ಗೆಲುವು ಸಾಸುವ ಮೂಲಕ ಭರ್ಜರಿ ಬಹುಮತ ಗಳಿಸಲಿದ್ದು, ಮೂರನೇ ಅವಗೆ ಕೇಂದ್ರದಲ್ಲಿ ಅಕಾರ ಹಿಡಿಯಲಿದೆ ಎಂದು ಹೇಳಿದೆ. ಇದೇ ವೇಳೆ ಎನ್ಡಿಎ ನಾಗಾಲೋಟಕ್ಕೆ ಅಡ್ಡಗಾಲು ಹಾಕುವ ತುಡಿತಲ್ಲಿರುವ ಇಂಡಿಯಾ ಮೈತ್ರಿಕೂಟವು ಕೇವಲ 163 ಸ್ಥಾನಗಳಲ್ಲಿ ಜಯ ಗಳಿಸುವ ಮೂಲಕ ಹೀನಾಯ ಸೋಲು ಕಾಣಲಿದೆ ಎಂದು ಸಮೀಕ್ಷೆಯು ಭವಿಷ್ಯ ನುಡಿದಿದೆ.
ಇಟಿಜಿ ಸಮೀಕ್ಷೆಯು ಬಿಜೆಪಿ ಏಕಾಂಗಿಯಾಗಿ ಸುಮಾರು 308-328 ಸ್ಥಾನಗಳನ್ನು ಗಳಿಸಬಹುದು ಎಂದು ಹೇಳಿದೆ. ಆದರೆ, ಕಾಂಗ್ರೆಸ್ ಮೂರನೇ ಬಾರಿಗೆ ಹೀನಾಯ ಪ್ರದರ್ಶನ ತೋರಲಿದ್ದು ಕೇವಲ 52-72 ಸ್ಥಾನ ಗಳಿಸಬಹುದು ಎಂದು ತಿಳಿಸಿದೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಸವಾಲೆಸೆಯುವ ಪ್ರಯತ್ನವಾಗಿ 18 ಪಕ್ಷಗಳು ಇಂಡಿಯಾ ಒಕ್ಕೂಟವನ್ನು ರಚಿಸಿಕೊಂಡಿದ್ದರೂ, 2024ರ ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವುದಿಲ್ಲ ಎಂಬುದನ್ನು ಸಮೀಕ್ಷೆಯು ಹೇಳುತ್ತಿದೆ.
ಹಿಂದೂಸ್ತಾನ್ ಸಮಾಚಾರ್
