
ನವದೆಹಲಿ, 2 ನವೆಂಬರ್ (ಹಿ.ಸ):
ಆ್ಯಂಕರ್ :ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಇಂದು ಕಡೆಯದಿನವಾಗಿದೆ. ಅಂತೆಯೇ ಛತ್ತೀಸ್ಗಢದಲ್ಲಿ ನಡೆಯಲಿರುವ ೨ನೇ ಹಂತದ ಚುನಾವಣೆಗೂ ಸಹ ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದೆ. ಮಧ್ಯಪ್ರದೇಶದಲ್ಲಿ ೨೩೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಇದೇ ೧೭ರಂದು ಮತದಾನ ನಡೆಯಲಿದೆ. ಛತ್ತೀಸ್ಗಢದ ೯೦ ವಿಧಾನಸಭಾ ಕ್ಷೇತ್ರಗಳ ಪೈಕಿ ೭೦ ಕ್ಷೇತ್ರಗಳಿಗೂ ಅಂದೇ ಮತದಾನ ನಿಗದಿಯಾಗಿದೆ. ಮಧ್ಯಪ್ರದೇಶದಲ್ಲಿ ಒಟ್ಟು ೨ ಸಾವಿರದ ೯೧೬ ನಾಮಪತ್ರಗಳು ಸಿಂಧುವಾಗಿವೆ. ರಾಜ್ಯದಲ್ಲಿ ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ಇದೇ ೪ರಂದು ಮಧ್ಯಪ್ರದೇಶದ ರತ್ಲಂ ಗೆ ಭೇಟಿ ನೀಡಿ, ಪ್ರಚಾರ ನಡೆಸಲಿದ್ದಾರೆ. ಅಲ್ಲದೇ ಬಂಜ್ಲಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಸಚಿವ ರಾಮದಾಸ್ ಅಠಾವಳೆ ನೇತೃತ್ವದ ಆರ್ಪಿಐ ಪಕ್ಷ ಮಧ್ಯಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲವನ್ನು ಘೋಷಿಸಿದೆ.
ಹಿಂದೂಸ್ತಾನ್ ಸಮಾಚಾರ್
