ನವದೆಹಲಿ, 23 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಪುರಸ್ಕೃತ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗೌರವ ಸಲ್ಲಿಸಿದರು.
ಚೌಧರಿ ಚರಣ್ ಸಿಂಗ್ ಅವರು ತಮ್ಮ ಸಂಪೂರ್ಣ ಜೀವನವನ್ನು ಸಮಾಜದ ದುರ್ಬಲ ವರ್ಗಗಳ ಕಲ್ಯಾಣ, ಕೃಷಿ ಕ್ಷೇತ್ರದ ಅಭಿವೃದ್ಧಿ ಮತ್ತು ರೈತರ ಸಮೃದ್ಧಿಗಾಗಿ ಸಮರ್ಪಿಸಿದ್ದರು ಎಂದು ಪ್ರಧಾನಿ ಹೇಳಿದರು.
ಈ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಸಂದೇಶ ಪ್ರಕಟಿಸಿದ ಪ್ರಧಾನಿ ಮೋದಿ, ರೈತರ ಹಕ್ಕುಗಳ ರಕ್ಷಣೆಗೆ ಮತ್ತು ಗ್ರಾಮೀಣ ಭಾರತದ ಬಲವರ್ಧನೆಗೆ ಚೌಧರಿ ಚರಣ್ ಸಿಂಗ್ ಅವರು ಮಾಡಿದ ಸೇವೆ ಅಪಾರವಾಗಿದೆ ಎಂದು ಪ್ರಶಂಸಿಸಿದ್ದು, ಅವರ ಆಲೋಚನೆಗಳು ಹಾಗೂ ನೀತಿಗಳು ಇಂದಿಗೂ ದೇಶಕ್ಕೆ ಸ್ಫೂರ್ತಿಯ ಮೂಲವಾಗಿವೆ ಎಂದಿದ್ದಾರೆ.
ರಾಷ್ಟ್ರ ನಿರ್ಮಾಣದಲ್ಲಿ ಚೌಧರಿ ಚರಣ್ ಸಿಂಗ್ ಅವರ ಕೊಡುಗೆ ಅಮೂಲ್ಯವಾಗಿದ್ದು, ಅದನ್ನು ದೇಶ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
