ಬಿಜಾಪುರ, 18 ಆಗಸ್ಟ್ (ಹಿ.ಸ.) :
ಆ್ಯಂಕರ್ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಭೋಪಾಲಪಟ್ಟಣದ ಉಲ್ಲೂರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಸೋಮವಾರ ಬೆಳಿಗ್ಗೆ ಐಇಡಿ ಸ್ಫೋಟ ನಡೆಸಿದ್ದಾರೆ. ಈ ದಾಳಿಯಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಯೋಧ ದಿನೇಶ್ ನಾಗ್ ಹುತಾತ್ಮರಾಗಿದ್ದಾರೆ.
ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಭೋಪಾಲಪಟ್ಟಣಂ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳ ಸ್ಥಿತಿ ಅಪಾಯದಿಂದ ಹೊರಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಂತರ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
