ದೆಹಲಿ, 15 ಜನವರಿ(ಹಿ.ಸ):
ಆ್ಯಂಕರ್ :
ಪ್ರಧಾನಮಂತ್ರಿ ಜನ್ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನದ ಭಾಗವಾಗಿ ಪ್ರಧಾನಮಂತ್ರಿ ಆವಾಸ್ ಗ್ರಾಮೀಣ ಯೋಜನೆಯಡಿ ಒಂದು ಲಕ್ಷ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮೊದಲ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಪಿಎಂ-ಜನ್ಮನ್ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರದ ಪ್ರಯೋಜನ ತಲುಪಿಸಿ ಆರ್ಥಿಕ ಸಬಲೀಕರಣಗೊಳಿಸುವ, ಅದರಲ್ಲೂ ಬುಡಕಟ್ಟು ಗುಂಪುಗಳ ದುರ್ಬಲರ ಸಾಮಾಜಿಕ-ಆರ್ಥಿಕ ಕಲ್ಯಾಣಕ್ಕಾಗಿ ಇದನ್ನು ಕಳೆದ ವರ್ಷ ನವೆಂಬರ್ನಲ್ಲಿ ಆರಂಭಿಸಲಾಗಿದೆ. ಸುಮಾರು ೨೪ ಸಾವಿರ ಕೋಟಿ ರೂಪಾಯಿಗಳ ಅಂದಾಜು ಖರ್ಚಿನ ಈ ಪಿಎಂ-ಜನ್ಮನ್ ೯ ಸಚಿವಾಲಯಗಳ ಮೂಲಕ ೧೧ ನಿರ್ಣಾಯಕ ವಿಷಯಗಳ ಬಗ್ಗೆ ಗಮನ ಹರಿಸಿದೆ. ಸುರಕ್ಷಿತ ವಸತಿ, ಶುದ್ಧ ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಮತ್ತು ಪೋಷಣೆ, ಸುಧಾರಿತ ವಿದ್ಯುತ್, ರಸ್ತೆ ಮತ್ತು ದೂರ ಸಂಪರ್ಕ, ಮತ್ತು ಸುಸ್ಥಿರ ಜೀವನೋಪಾಯದ ಅವಕಾಶಗಳು ಸೇರಿದಂತೆ ಮೂಲಭೂತ ಸೌಲಭ್ಯಗಳೊಂದಿಗೆ ಸಾಮಾಜಿಕ-ಆರ್ಥಿಕ ಪರಿಸ್ಥಿತಿ ಸುಧಾರಿಸುವ ಯೋಜನೆ ಇದಾಗಿದೆ.
ಹಿಂದೂಸ್ತಾನ್ ಸಮಾಚಾರ್
