ದೆಹಲಿ , 14ನವೆಂಬರ್ (ಹಿ.ಸ):
ಆ್ಯಂಕರ್ :ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಜನರಿಗಾಗಿ ಮಾಡುತ್ತಿರುವ ಕೆಲಸಗಳನ್ನು ಜನರಲ್ಲಿಗೆ ತಲುಪಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 15 ರಂದು ಜಾರ್ಖಂಡ್ನ ಖುಂಟಿಯಿಂದ ವಿಕಸಿತ್ ಭಾರತ್ ಮಿಷನ್ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದಾರೆ. ಇದರೊಂದಿಗೆ ಬುಡಕಟ್ಟು ಜನಾಂಗದವರ ಬದುಕನ್ನು ಸುಧಾರಿಸುವ ಒಟ್ಟಾರೆ ಯೋಜನೆಗಳ ಚಿತ್ರಣವನ್ನು ಪ್ರಸ್ತುತಪಡಿಸಲಾಗುತ್ತದೆ.
ಲಭಿಸಿರುವ ಮಾಹಿತಿಯ ಪ್ರಕಾರ, ವಿಕಸಿತ್ ಭಾರತ್ ರಥವು ದೇಶದ 24 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮೂಲಕ ಹಾದುಹೋಗುತ್ತದೆ. ಇದರಲ್ಲಿ ಪ್ರಸ್ತುತ ಈ ರಥವು ದೇಶದ 69 ಜಿಲ್ಲೆಗಳ 393 ಬ್ಲಾಕ್ಗಳು ಮತ್ತು 8940 ಪಂಚಾಯತ್ಗಳಲ್ಲಿ ಹಾದು ಹೋಗಲಿದೆ.
ಹಿಂದೂಸ್ತಾನ್ ಸಮಾಚಾರ್
