ಚೈಬಾಸಾ,, 22 ಡಿಸೆಂಬರ್(ಹಿ.ಸ):
ಆ್ಯಂಕರ್ :
ನಿಷೇಧಿತ ಸಿಪಿಐ (ಮಾವೋವಾದಿ) ನಕ್ಸಲರು ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ರೈಲ್ವೆ ಹಳಿಗಳ ಒಂದು ಭಾಗವನ್ನು ಸ್ಪೋಟಿಸಿದ್ದಾರೆ ಇದರಿಂದ ಹೌರಾ-ಮುಂಬೈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 150 ಕಿಮೀ ದೂರದಲ್ಲಿರುವ ಗೋಯಿಲ್ಕೆರಾ ಮತ್ತು ಪೊಸೊಯಿಟಾ ರೈಲು ನಿಲ್ದಾಣಗಳ ನಡುವೆ ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ ಎಂದು ಪಶ್ಚಿಮ ಸಿಂಗ್ಭೂಮ್ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
