
ಪೂನಾ,17 ಅಕ್ಟೋಬರ್ (ಹಿ.ಸ):
ಆ್ಯಂಕರ್ :, ಮಹಾರಾಷ್ಟ್ರದ ಪುಣೆಯಲ್ಲಿ ತಡ ರಾತ್ರಿ ಟ್ಯಾಂಕರ್ಗೆ ಟ್ರಕ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪುಣೆ-ಬೆಂಗಳೂರು ಹೆದ್ದಾರಿಯ ಸ್ವಾಮಿನಾರಾಯಣ ದೇವಸ್ಥಾನ ಮತ್ತು ನವ್ಲೆ ಸೇತುವೆಯ ಬಳಿ ರಾತ್ರಿ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೇಲ್ನೋಟಕ್ಕೆ ಬ್ರೇಕ್ ವೈಫಲ್ಯದಿಂದ ಟ್ರಕ್ ಕಂಟೇನರ್ಗೆ ಡಿಕ್ಕಿ ಹೊಡೆದು ನಂತರ ಮತ್ತೊಂದು ಟ್ರಕ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ಮೇರೆಗೆ ಪುಣೆ ಮಹಾನಗರ ಪಾಲಿಕೆಯ ಅಗ್ನಿಶಾಮಕ ದಳದ ಅ„ಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ.
ಹಿಂದೂಸ್ತಾನ್ ಸಮಾಚಾರ್
