ಚೆನ್ನೈ,, 19 ಡಿಸೆಂಬರ್(ಹಿ.ಸ):
ಆ್ಯಂಕರ್ :
ದಕ್ಷಿಣ ತಮಿಳುನಾಡಿನಲ್ಲಿ ಮಂಗಳವಾರವೂ ಭಾರೀ ಮಳೆ ಮುಂದುವರಿದಿದೆ. ಮಳೆ ಸಂಬಂಧಿತ ಅವಘಡಗಳಿಂದ ಮೂವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿಗೆ ಇಂದು ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಐಎಂಡಿ ತಿಳಿಸಿದೆ. ದಕ್ಷಿಣ ತಮಿಳುನಾಡಿನಲ್ಲಿ ಸುಮಾರು 39 ಪ್ರದೇಶಗಳು ಭಾರೀ ಮಳೆಗೆ ಸಾಕ್ಷಿಯಾಗಿದೆ.
ಹಿಂದೂಸ್ತಾನ್ ಸಮಾಚಾರ್
