ನವದೆಹಲಿ,12ನವೆಂಬರ್ (ಹಿ.ಸ):
ಆ್ಯಂಕರ್ :
ಪ್ರಧಾನಿ ನರೇಂದ್ರ ಮೋದಿ ಇಂದು ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ಬೆಳಕಿನ ಹಬ್ಬ ದೀಪಾವಳಿ ಅಜ್ಞಾನದ ಅಂಧಕಾರ ತೊಡೆದು ಸುಜ್ಞಾನದ ಬೆಳಕು ಹರಿಸಲಿ ಎಂದು ಹಾರೈಸುತ್ತೇನೆ. ಹಣತೆಗಳನ್ನು ಬೆಳಗಿ, ಹಸಿರು ಪಟಾಕಿಗಳನ್ನು ಮಾತ್ರವೇ ಸಿಡಿಸಿ ಸುರಕ್ಷಿತವಾಗಿ ದೀಪಾವಳಿಯನ್ನು ಆಚರಿಸಿ. ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಶುಭಾಶಯಗಳು ಎಂದು ಸಾಮಾಜಿಕ ತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
