
ನವದೆಹಲಿ,28ನವೆಂಬರ್ (ಹಿ.ಸ):
ಆ್ಯಂಕರ್ :
ದೆಹಲಿಯಲ್ಲಿ ಇಂದಿನಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಆರಂಭವಾಗಲಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೆನಾ, ದೆಹಲಿ ಸಂಸದರು ಹಾಗೂ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಕೇಂದ್ರ ಸರ್ಕಾರ ಆರಂಭಿಸಿರುವ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಜನ ಜಾಗೃತಿ ಮೂಡಿಸಿ, ಅವುಗಳ ಕುರಿತು ಮಾಹಿತಿ ಪಸರಿಸುವುದು ಯಾತ್ರೆಯ ಪ್ರಮುಖ ಉದ್ದೇಶವಾಗಿದೆ. ಯಾತ್ರೆಯಡಿ ಮಾಹಿತಿ ಹಾಗೂ ಸಂಪರ್ಕ ವಾಹನಗಳು ದೆಹಲಿಯ ೧೧ ಜಿಲ್ಲೆಗಳ ೬೦೦ ಪ್ರದೇಶಗಳನ್ನು ಸಂಚರಿಸಿ, ಜನರಿಗೆ ಮಾಹಿತಿ ನೀಡಲಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ ೧೫ರಂದು ಯಾತ್ರೆಗೆ ಚಾಲನೆ ನೀಡಿದ್ದರು. ೨೦೪೭ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗುವ ಗುರಿ ಹೊಂದಿರುವುದರಿಂದ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ, ಜನರ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳಲು ವಿಕಸಿತ ಭಾರತ ಸಂಕಲ್ಪ ಯಾತ್ರೆ ಆರಂಭಿಸಲಾಗಿದೆ. ಅಭಿಯಾನದ ಅಡಿಯಲ್ಲಿ ದೆಹಲಿಯ ವಿವಿಧ ಸ್ಥಳಗಳಲ್ಲಿ ಪಿಎಂ ಸ್ವನಿಧಿ ಶಿಬಿರ, ಆರೋಗ್ಯ ಶಿಬಿರ, ಆಯುಷ್ಮಾನ್ ಕಾರ್ಡ್ ಶಿಬಿರ, ಪಿಎಂ ಉಜ್ವಲ ಶಿಬಿರದಂತಹ ಸ್ಪಾಟ್ ಕ್ಯಾಂಪ್ಗಳನ್ನು ಆಯೋಜಿಸಲಾಗಿದೆ ಎಂದು ನಮ್ಮ ಬಾತ್ಮೀದಾರರು ವರದಿ ಮಾಡಿದ್ದಾರೆ.
ಅಭಿಯಾನದ ಉದ್ದೇಶ ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಮಾಹಿತಿಯ ಪ್ರಸಾರ ಮಾಡುವುದಲ್ಲದೇ, ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಹನ ನಡೆಸುವ ಮೂಲಕ ನಾಗರಿಕರು ಮಾಹಿತಿ ಪಡೆಯಬಹುದಾಗಿದೆ. ಯಾತ್ರೆಯ ಸಮಯದಲ್ಲಿ ಜನರು ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಸಾಧ್ಯವಾಗಲಿದೆ.
ಹಿಂದೂಸ್ತಾನ್ ಸಮಾಚಾರ್
