ನವದೆಹಲಿ, 16 ಜುಲೈ (ಹಿ.ಸ.) :
ಆ್ಯಂಕರ್ : ರಾಷ್ಟ್ರ ರಾಜಧಾನಿಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ನಿರಂತರವಾಗಿ ಬಾಂಬ್ ಬೆದರಿಕೆ ಇಮೇಲ್‌ಗಳು ಬರುತ್ತಿರುವ ಬೆಳವಣಿಗೆಯಲ್ಲಿ, ಮೂರನೇ ದಿನವಾದ ಇಂದು ಇಂತಹ ಇಮೇಲ್‌ಗಳು ಮುಂದುವರೆದಿವೆ. ದ್ವಾರಕಾ, ವಸಂತ್ ವಿಹಾರ್, ಲೋಧಿ ಕಾಲೋನಿ, ಹೌಜ್ ಖಾಸ್ ಹಾಗೂ ಪಶ್ಚಿಮ ವಿಹಾರ್‌ನಲ್ಲಿರುವ ಐದು ಶಾಲೆಗಳಿಗೆ ಇಂದು ಬೆಳಿಗ್ಗೆ ಇ-ಮೇಲ್ ಮೂಲಕ ಬಾಂಬ್ ದಾಳಿ ಬೆದರಿಕೆಗಳು ಬಂದಿವೆ.
ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕೆಲ ಶಾಲೆಗಳಲ್ಲಿ ಈ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಇಮೇಲ್ ಮೂಲ ಪತ್ತೆಗೆ ಸೈಬರ್ ಸೆಲ್‌ನ ಸಹಾಯವನ್ನು ಪಡೆಯುತ್ತಿದ್ದಾರೆ.
ಸಾರ್ವಜನಿಕರಿಗೆ ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
