ನವದೆಹಲಿ, 20 ಆಗಸ್ಟ್ (ಹಿ.ಸ.) :
ಆ್ಯಂಕರ್ : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ಇಂದು ಬೆಳಿಗ್ಗೆ ಸಾರ್ವಜನಿಕರ ಅಹವಾಲು ಆಲಿಸುವ ವೇಳೆ ವ್ಯಕ್ತಿಯೊಬ್ಬ ಹಠಾತ್ ಹಲ್ಲೆ ನಡೆಸಿದ್ದಾನೆ.
ಈ ವೇಳೆ ಮುಖ್ಯಮಂತ್ರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಅವರ ಕ್ಯಾಂಪ್ ಕಚೇರಿಯಲ್ಲಿ ನಡೆದಿದ್ದು, ಹಠಾತ್ ನಡೆದ ದಾಳಿಯಿಂದ ಗದ್ದಲದ ಪರಿಸ್ಥಿತಿ ಉಂಟಾಯಿತು.
ಪೊಲೀಸರು ತಕ್ಷಣವೇ ಹಲ್ಲೆಕೋರನನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ. ದಾಳಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ, ಇದನ್ನು ಗಂಭೀರ ಭದ್ರತಾ ಲೋಪವೆಂದು ಪರಿಗಣಿಸಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
