• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ದೇವರಾಜ ಅರಸು ದಾಖಲೆ ಮುರಿದು ಸಿದ್ದರಾಮಯ್ಯ ಹೊಸ ಇತಿಹಾಸ
National

ದೇವರಾಜ ಅರಸು ದಾಖಲೆ ಮುರಿದು ಸಿದ್ದರಾಮಯ್ಯ ಹೊಸ ಇತಿಹಾಸ

CliQ INDIA
Last updated: January 6, 2026 6:15 pm
CliQ INDIA
Share
2 Min Read
SHARE

ಬೆಂಗಳೂರು, 06 ಜನವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಇಂದು ಸೇರಿದೆ. ರಾಜ್ಯದಲ್ಲಿ ಅತಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದೇವರಾಜ ಅರಸು ಅವರ ದಾಖಲೆಯನ್ನು ಮುರಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಜನವರಿ 6 ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಗೆ ಐತಿಹಾಸಿಕ ದಿನವಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿ ಸ್ಥಾನದಲ್ಲಿರುವ ಸಾಧನೆಯನ್ನು ಅವರು ತಮ್ಮ ಹೆಸರಿಗೆ ಬರಮಾಡಿಕೊಂಡಿದ್ದಾರೆ.

ಇಂದಿನ ದಿನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 7 ವರ್ಷ 239 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಮೂಲಕ 2,789 ದಿನಗಳ ಕಾಲ ಮುಖ್ಯಮಂತ್ರಿ ಆಗಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಸಮಗೊಳಿಸಿ ನಂತರ ಮುರಿದ ಸಾಧನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಸಿದ್ದರಾಮಯ್ಯ ಅವರನ್ನು ಈಗ ‘ದಾಖಲೆ ರಾಮಯ್ಯ’ ಎಂದು ಕರೆಯಲಾಗುತ್ತಿದೆ.

2013ರಲ್ಲಿ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ

ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕನಾಗಿರುವ ಸಿದ್ದರಾಮಯ್ಯ ಅವರು ತಮ್ಮದೇ ಆದ ರಾಜಕೀಯ ಚಾತುರ್ಯ ಮತ್ತು ಜನಬೆಂಬಲದ ಮೂಲಕ ನಾಯಕತ್ವಕ್ಕೆ ಏರಿದ್ದಾರೆ. 2013ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ ಅವರು 2013ರಿಂದ 2018ರವರೆಗೆ ಪೂರ್ಣ ಐದು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದರು. ಈ ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ ಅವರು 1,829 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

2023ರಲ್ಲಿ ಎರಡನೇ ಅವಧಿ, ಹೊಸ ದಾಖಲೆ

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಗಳಿಸಿದ ಬಳಿಕ, ಮೇ 20, 2023ರಂದು ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದರು. ಇದೀಗ ಎರಡನೇ ಅವಧಿಯ ಆಡಳಿತದೊಂದಿಗೆ ಒಟ್ಟು ಅವಧಿಯಲ್ಲಿ ದೇವರಾಜ ಅರಸು ಅವರ ದಾಖಲೆಯನ್ನು ಮುರಿದು ರಾಜ್ಯದ ದೀರ್ಘಕಾಲದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಲೋಕದಳದಿಂದ ಕಾಂಗ್ರೆಸ್‌ವರೆಗೆ ರಾಜಕೀಯ ಪಯಣ

ಸಿದ್ದರಾಮಯ್ಯ ಅವರ ರಾಜಕೀಯ ಜೀವನ ಲೋಕದಳದಿಂದ ಆರಂಭವಾಯಿತು. ಬಳಿಕ ಜನತಾದಳ ಸೇರಿ ರಾಜ್ಯ ರಾಜಕೀಯದಲ್ಲಿ ಪ್ರಭಾವಶಾಲಿ ನಾಯಕರಾಗಿ ಬೆಳೆದ ಅವರು, ಜೆಡಿಎಸ್ ಪಕ್ಷವನ್ನು ತೊರೆದು 2006ರಲ್ಲಿ ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ಪಕ್ಷದಲ್ಲಿ ಸಂಘಟನೆಗೆ ಶ್ರಮಿಸಿ, ಪಕ್ಷದ ಬಲಿಷ್ಠ ನಾಯಕನಾಗಿ ಹೊರಹೊಮ್ಮಿದ ಸಿದ್ದರಾಮಯ್ಯ ಇದೀಗ ಎರಡು ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿ ಅಪೂರ್ವ ದಾಖಲೆ ನಿರ್ಮಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಅವಧಿ ಸೇವೆ ಸಲ್ಲಿಸಿರುವವರ ಪಟ್ಟಿಯಲ್ಲಿ ದೇವರಾಜ ಅರಸು (7 ವರ್ಷ 239 ದಿನ) ಮೊದಲ ಸ್ಥಾನದಲ್ಲಿದ್ದರೆ, ಎಸ್. ನಿಜಲಿಂಗಪ್ಪ (7 ವರ್ಷ 175 ದಿನ), ರಾಮಕೃಷ್ಣ ಹೆಗಡೆ (5 ವರ್ಷ 216 ದಿನ) ಮತ್ತು ಬಿ.ಎಸ್. ಯಡಿಯೂರಪ್ಪ (5 ವರ್ಷ 82 ದಿನ) ಮುಂದಿನ ಸ್ಥಾನಗಳಲ್ಲಿ ಇದ್ದರು. ಇದೀಗ ಸಿದ್ದರಾಮಯ್ಯ ಅವರು ಅರಸು ಅವರ ದಾಖಲೆಯನ್ನು ಮುರಿದು ಮೊದಲ ಸ್ಥಾನಕ್ಕೇರಿದ್ದಾರೆ.

ಇದೇ ವೇಳೆ ರಾಜ್ಯ ಬಜೆಟ್ ಮಂಡನೆಯಲ್ಲೂ ಸಿದ್ದರಾಮಯ್ಯ ಹೊಸ ದಾಖಲೆ ಬರೆದಿದ್ದಾರೆ. ಇದುವರೆಗೂ ಅವರು ಒಟ್ಟು 16 ಬಜೆಟ್ ಮಂಡಿಸಿದ್ದು, ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರ ಪ್ರದೇಶ ಭೇಟಿ
ನೇಪಾಳದಲ್ಲಿ ಶಾಂತಿಯುತ ಮತದಾನ: ಭಾರತದಿಂದ ಸ್ವಾಗತ ನೇಪಾಳದಲ್ಲಿ 275 ಸಂಸದೀಯ ಸ್ಥಾನಗಳಿಗೆ ನಡೆದ ಮತದಾನವು ಶೇ. 60ರಷ್ಟು ಮತದಾನದೊಂದಿಗೆ ಮುಕ್ತಾಯಗೊಂಡಿದೆ. ರಾಜಕೀಯ ಅಶಾಂತಿಯ ನಂತರ ನಡೆದ ಈ ಶಾಂತಿಯುತ ಚುನಾವಣೆಗಳನ್ನು ಭಾರತ ಸ್ವಾಗತಿಸಿದೆ.
ಸಹೋದ್ಯೋಗಿಗಳ ಮೇಲೆ ಸೈನಿಕನಿಂದ ಗುಂಡಿನ‌ ದಾಳಿ | BulletsIn
ಭಾರತೀಯ ನೆಲದಲ್ಲಿ ಪಾಕಿಸ್ತಾನಕ್ಕೆ ಅಫ್ಪಾನಿಸ್ತಾನ ವಿದೇಶಾಂಗ ಸಚಿವ ಮುತ್ತಕಿ ಎಚ್ಚರಿಕೆ
ಪೂರ್ವ ಚಂಪಾರಣ್ ತಲುಪಿದ ವಿಶ್ವದ ಅತಿದೊಡ್ಡ ಶಿವಲಿಂಗ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಗ್ರೇಟರ್ ನೋಯಿಡಾದ ನಾಲ್ಕು ಗ್ರಾಮಗಳಲ್ಲಿ ಇ–ಲೈಬ್ರರಿಗಳ ನಿರ್ಮಾಣಕ್ಕೆ ಭೂಮಿಪೂಜೆ; ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ
Next Article ಒಂದು ಟ್ರಿಲಿಯನ್ ಡಾಲರ್ ಆರ್ಥಿಕ ಗುರಿಯ ಹಿನ್ನೆಲೆಯಲ್ಲಿ ನೋಯ್ಡಾ ಪ್ರಾಧಿಕಾರದಿಂದ ಕೈಗಾರಿಕಾ ಪ್ಲಾಟ್‌ಗಳ ಸಮಗ್ರ ಪರಿಶೀಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?