ನವದೆಹಲಿ, 28ಅಕ್ಟೋಬರ್ (ಹಿ.ಸ):
ಆ್ಯಂಕರ್ :
ದೇಶಾದ್ಯಂತ ೩೭ ಸ್ಥಳಗಳಲ್ಲಿ ಇಂದು ರೋಜ್ಗಾರ್ ಮೇಳ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ೫೧ ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ನೂತನವಾಗಿ ನೇಮಕಗೊಂಡವರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ನೇಮಕಾತಿಗಳು ನಡೆಯುತ್ತಿವೆ. ರೈಲ್ವೆ ಸಚಿವಾಲಯ, ಗೃಹ ಸಚಿವಾಲಯ, ಅಂಚೆ ಇಲಾಖೆ, ಕಂದಾಯ ಮತ್ತು ಉನ್ನತ ಶಿಕ್ಷಣ ಸೇರಿದಂತೆ ವಿವಿಧ ಸಚಿವಾಲಯ ಮತ್ತು ಇಲಾಖೆಗಳಲ್ಲಿ ನೇಮಕಾತಿ ಆಗಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳವು ಒಂದು ಪ್ರಮುಖ ಹೆಜ್ಜೆಯಾಗಿದೆ. ರೋಜ್ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ಹೆಚ್ಚು ಪೂರಕವಾಗಿದೆ. ಯುವಜನರ ಸಬಲೀಕರಣ ಮತ್ತು ರಾಷ್ಟ್ರಾಭಿವೃದ್ಧಿಯಲ್ಲಿ ಅವರು ಪಾಲೊಳ್ಳಲು ಅವಕಾಶಗಳನ್ನು ನೀಡುತ್ತದೆ.
ಹಿಂದೂಸ್ತಾನ್ ಸಮಾಚಾರ್
